ಅವರಿಬ್ಬರು ಕಳೆದ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರಂತೆ. ಇನ್ನೇನು ತಾವಿಬ್ಬರು ಮದುವೆಯಾಗಬೇಕು ಎಂದುಕೊಂಡವರಿಗೆ ಅಡ್ಡಲಾಗಿದ್ದು ಬಜರಂಗದಳವರು.
ಹೌದು, ಜಾಫರ್, ಚೈತ್ರಾ ಸೆ.14 ರಂದು ಚಿಕ್ಕಮಗಳೂರಿನ ರತ್ನಗಿರಿ ರಸ್ತೆಯಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿಗೆ ವಿವಾಹವಾಗಲು ಹೋಗಿದ್ದರು.
ಈ ವಿಚಾರ ತಿಳಿಯುತ್ತಿದ್ದಂತೆಯೇ ಹಿಂದೂ ಸಂಘಟನೆ ಕಾರ್ಯಕರ್ತರು ಸ್ಥಳಕ್ಕೆ ಬಂದಿದ್ದಾರೆ. ಬಂದವರೇ ಮದುವೆಯನ್ನು ತಡೆಹಿಡಿದಿದ್ದರು.
ಅಷ್ಟೆ ಅಲ್ಲ ಮುಸ್ಲಿಂ ಯುವಕನ ವಿರುದ್ಧ ಲವ್ ಜಿಹಾದ್ ಆರೋಪ ಹೊರೆಸಿ, ಇಬ್ಬರನ್ನು ಪೊಲೀಸ್ ಠಾಣೆಗೆ ಕಳುಹಿಸಿದ್ದಾರೆ. ಬಳಿಕ ಚಿಕ್ಕಮಗಳೂರು ಮಹಿಳಾ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸಿ, ನೈತಿಕ ಪೊಲೀಸ್ ಗಿರಿ ದೂರಿನನ್ವಯ ಈ ಸಂಘಟನೆಯ ನಾಲ್ವರು ಕಾರ್ಯಕರ್ತರ ವಿರುದ್ದ ಕೇಸ್ ದಾಖಲು ಮಾಡಿಕೊಂಡಿದ್ದರು.
ಈ ಕುರಿತಂತೆ ಯುವತಿ ಮಾತನಾಡಿ, ಇದು ನಮ್ಮ ಇಷ್ಟದಂತೆ ಮದುವೆಯಾಗುತ್ತಿದ್ದೇವೆ. ಆ ಸಂಘಟನೆಯವರು ನನ್ನ ಪತಿಯನ್ನು ಥಳಿಸಿದ್ದಾರೆ. ಅವಾಚ್ಯ ಶಬ್ದದಿಂದ ಬೈದಿದ್ದಾರೆ. ನನ್ನ ಮದುವೆಯನ್ನು ತಡೆಯಲು ಅವರ್ಯಾರು ಎಂದು ಪ್ರಶ್ನಿಸಿದ್ದಾರೆ.
ಅಷ್ಟೆ ಅಲ್ಲ ನನ್ನ ಪತಿಯನ್ನು ಅವರು ಥಳಿಸಿದರೂ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ. ಪೊಲೀಸರು ಕೂಡ ಅವರಿಗೆ ಬೇಲ್ ಕೊಟ್ಟು ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ
Laxmi News 24×7