Breaking News

ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ಕಡಿತ: ಸರ್ಕಾರಕ್ಕೆ ಸಿದ್ದರಾಮಯ್ಯ ತರಾಟೆ

Spread the love

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ಕಡಿತಗೊಳಿಸಿರುವ ವಿಚಾರಕ್ಕೆ ಸಂಬಂಂಧಿಸಿ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

 

ಇಂದಿರಾ ಕ್ಯಾಂಟೀನ್‌ ವಿಚಾರಕ್ಕೆ ಸಂಬಂಧಿಸಿ ಸರಣಿ ಟ್ವೀಟ್ ಮಾಡಿರುವ ಅವರು, ‘ನಮ್ಮ ಸರ್ಕಾರ ಪ್ರಾರಂಭಿಸಿದ್ದ ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ನೀಡದೆ ಬಿಜೆಪಿ ಸರ್ಕಾರ ಬಡವರ ಹೊಟ್ಟೆಗೆ ಹೊಡೆಯಲು ಹೊರಟಿದೆ’ ಎಂದು ಕಿಡಿಕಾರಿದ್ದಾರೆ.

ಇಂದಿರಾ ಕ್ಯಾಂಟೀನ್‌ಗಳಿಗೆ 2017-2018, 2018-19ರಲ್ಲಿ ಕ್ರಮವಾಗಿ ₹100 ಮತ್ತು ₹145 ಕೋಟಿ ಅನುದಾನ ನೀಡಿದ್ದ ಬಿಬಿಎಂಪಿ, ಈ ವರ್ಷ ಕೇವಲ ₹60 ಕೋಟಿ ಕೊಟ್ಟಿದೆ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

‘ಕಳಪೆ ದರ್ಜೆಯ ಊಟ, ತಿಂಡಿ ನೀಡಲಾಗುತ್ತಿದೆ ಎಂದು ಜನ ಬರುವುದಿಲ್ಲ ಎಂಬ ನೆಪವೊಡ್ಡಿ ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚುವುದು ಬಿಜೆಪಿ ಸರ್ಕಾರದ ಹುನ್ನಾರವಾಗಿದೆ. ಕ್ಯಾಂಟೀನ್‌ಗಳಿಗೆ ಪ್ರತಿದಿನ ಬರುತ್ತಿದ್ದ 300-400 ಜನರ ಸಂಖ್ಯೆ ಈಗ 50-100ಕ್ಕೆ ಇಳಿದಿದೆಯಂತೆ. ಹಾಗಾದರೇ ಬೆಂಗಳೂರು ನಗರದ ಬಡವರೆಲ್ಲರೂ ಶ್ರೀಮಂತರಾದರೇ’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ ತನ್ನ 50ನೇ ಮಾಸಿಕ ಸಭೆಯನ್ನು ಅದ್ಧೂರಿಯಾಗಿ ಆಚರಿಸಿತು..

Spread the love ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ