Breaking News

ಸಿದ್ದರಾಮಯ್ಯರ ಮುಂದೆ ಸಿ.ಟಿ ರವಿ ಇನ್ನೂ ಬಚ್ಚಾ: ಶಾಸಕ ರಾಘವೇಂದ್ರ ಹಿಟ್ನಾಳ್​​

Spread the love

ಕೊಪ್ಪಳ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾತನಾಡಿದರೆ ರಾಷ್ಟ್ರ ಮಟ್ಟದ ನಾಯಕನಾಗುತ್ತೇನೆಂಬ ಭಮ್ರೆಯಲ್ಲಿ ಸಿ.ಟಿ ರವಿ ಇದ್ದಾರೆ. ಸಿದ್ದರಾಮಯ್ಯರ ಮುಂದೆ ಸಿ.ಟಿ ರವಿ ಇನ್ನೂ ಬಚ್ಚಾ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ವಾಗ್ದಾಳಿ ನಡೆಸಿದರು.

ಕೊಪ್ಪಳದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮೋತ್ಸವದಲ್ಲಿ ಲಕ್ಷ ಲಕ್ಷ ಜನ ಸೇರಿದ್ದರು. ಅದು ರಾಜ್ಯದ ಜನ ಸಿದ್ದರಾಮಯ್ಯರ ಮೇಲಿರುವ ಪ್ರೀತಿಗೆ ಸಾಕ್ಷಿಯಾಗಿದೆ. ಅಂತವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು.

ಸಿ.ಟಿ ರವಿಗೆ ಅನುಭವದ ಕೊರತೆ ಇದೆ. ಮುಂದಿನ ಚುನಾವಣೆಯಲ್ಲಿ ಜನ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ನಾಯಕನಾದವನು ಅಭಿವೃದ್ಧಿ ಕೆಲಸಗಳನ್ನ ಮಾಡುವ ಮೂಲಕ ಜನರ ಮನಸ್ಸನ್ನು ಗೆಲ್ಲಬೇಕು. ಅದು ಬಿಟ್ಟು ಸಿದ್ದರಾಮಯ್ಯ ಅವರನ್ನು ಬೈದರೆ ರಾಷ್ಟ್ರ ಮಟ್ಟದ ನಾಯಕನಾಗುತ್ತೆನೆ ಎನ್ನುವ ಭಮ್ರೆ ಬಿಡಬೇಕು ಎಂದು ಸಲಹೆ ನೀಡಿದರು.ರಾಜ್ಯದಲ್ಲಿ ಸಿದ್ದರಾಮಯ್ಯ ಸಮರ್ಥ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ಆಡಳಿತ ಪಕ್ಷದ ಕಾರ್ಯವೈಕರಿ ಹಾದಿ ತಪ್ಪಿದ್ದಲ್ಲಿ ಅದನ್ನ ಮುಲಾಜಿಲ್ಲದೆ ಖಂಡಿಸುತ್ತಾರೆ. ಆ ಮೂಲಕ ಅವರು ದೇಶದಲ್ಲಿಯೇ ಅತ್ಯುತ್ತಮ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಬಾರದು ಎಂದು ಹಿಟ್ನಾಳ್ ಗುಡುಗಿದರು.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ