Breaking News

ಈಗಲೇ ಹೊಸದಾಗಿ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಆರಂಭಿಸುವುದಿಲ್ಲ: ಬಿ.ಸಿ.ನಾಗೇಶ್ ಸ್ಪಷ್ಟನೆ

Spread the love

ಬೆಳಗಾವಿ: ರಾಜ್ಯದಲ್ಲಿರುವ ಕರ್ನಾಟಕ ಪಬ್ಲಿಕ್‌ ಶಾಲೆ (ಕೆಪಿಎಸ್‌)ಗಳಿಗೆ ಆಂಗ್ಲ ಮಾಧ್ಯಮ ಶಿಕ್ಷಕರನ್ನು ನೇಮಿಸುವವರೆಗೆ ಹೊಸದಾಗಿ ಕೆಪಿಎಸ್‌ ಹಾಗೂ ಸರ್ಕಾರಿ ಇಂಗ್ಲಿಷ್‌ ಮಾಧ್ಯಮ ಶಾಲೆ ಆರಂಭಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಸ್ಪಷ್ಟಪಡಿಸಿದರು.

 

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಧ್ಯ 276 ಕೆಪಿಎಸ್‌ಗಳಿವೆ. ಮತ್ತೆ ತ್ವರಿತವಾಗಿ ಕೆ‍ಪಿಎಸ್‌ ಹಾಗೂ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಿದರೆ, ಭಾಷಾ ಶಿಕ್ಷಕರ ಕೊರತೆ ಎದುರಾಗುತ್ತದೆ. ಅಂತಹ ಪ್ರಯತ್ನಕ್ಕೆ ಮಂದಾಗುವುದಿಲ್ಲ. ಬದಲಾಗಿ ಶೀಘ್ರ ಆಂಗ್ಲ ಮಾಧ್ಯಮ ಶಿಕ್ಷಕರ ನೇಮಕಾತಿ ನಡೆಸಲಾಗುವುದು ಎಂದು ಹೇಳಿದರು.

ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಕರು ತರಗತಿ ಅವಧಿಯಲ್ಲಿ ಗೈರಾಗಿ, ಖಾಸಗಿ ಕಾರ್ಯಕ್ರಮಕ್ಕೆ ಹಾಜರಾದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

‘ರಾಜ್ಯದ ಬಹುತೇಕ ಶಾಲೆಗಳಲ್ಲಿ ಬಯೋಮೆಟ್ರಿಕ್ ಅಳವಡಿಕೆಯಾಗಿದೆ. ಶಿಕ್ಷಕರ ಹಾಜರಾತಿ ಬಗ್ಗೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಆದರೂ, ಕುಗ್ರಾಮ, ಬೆಟ್ಟ ಹಾಗೂ ತೋಟಪಟ್ಟಿಗಳಲ್ಲಿ ಇರುವ ಶಾಲೆಗಳಲ್ಲಿ ಶಿಕ್ಷಕರು ನಿಯಮಾನುಸಾರ ತರಗತಿಗೆ ಹಾಜರಾಗುತ್ತಿಲ್ಲ ಎಂಬ ದೂರು ಬರುತ್ತಿವೆ. ಶಿಕ್ಷಕರು ಇದನ್ನೇ ಮುಂದುವರಿಸಬಾರದು. ಶಾಲೆಗೆ ಬರಲು ಬಸ್ ಸೌಕರ್ಯದ ಕೊರತೆ ನೆಪ ಹೇಳಬಾರದು ಎಂದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ