Breaking News

ಪ್ರಕೃತಿ ಪ್ರಲಾಪ: ಶೈಕ್ಷಣಿಕ ವ್ಯವಸ್ಥೆಗೆ ಸಂಕಷ್ಟ

Spread the love

ಬೆಳಗಾವಿ: ಈ ವರ್ಷದ ಅತಿಯಾದ ಮಳೆ ಮತ್ತು ನದಿಗಳ ಪ್ರವಾಹ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸಾಕಷ್ಟು ಹಾನಿ ಉಂಟುಮಾಡಿದೆ. ಕೃಷಿ ಕ್ಷೇತ್ರದ ಜೊತೆಗೆ ಮೂಲಭೂತ ಸೌಕರ್ಯಗಳಿಗೂ ಇದರ ಪರಿಣಾಮ ಬೀರಿದೆ. ಶೈಕ್ಷಣಿಕ ಕ್ಷೇತ್ರ ಸಹ ಇದರಿಂದ ಹೊರತಾಗಿಲ್ಲ.

 

ಕಳೆದ ಮೂರು ತಿಂಗಳಿಂದ ಜಿಲ್ಲೆಯಲ್ಲಿ ಸುರಿದ ಮಳೆ ಹಾಗೂ ನದಿಗಳ ಪ್ರವಾಹದಿಂದ ಶಾಲೆಗಳ ಸ್ಥಿತಿ ಶೋಚನೀಯವಾಗಿದೆ. ಮೊದಲೇ ಅನುದಾನದ ಕೊರತೆಯಿಂದ ಬಳಲುತ್ತಿರುವ ಶಾಲೆಗಳು ಈಗ ಕೊಠಡಿಗಳ ದುರಸ್ತಿ ವಿಷಯದಲ್ಲಿ ಮತ್ತಷ್ಟು ಸಮಸ್ಯೆಗೆ ತುತ್ತಾಗಿವೆ. ಇದು ಮಕ್ಕಳ ಶಿಕ್ಷಣದ ಮೇಲೆಯೂ ಪರಿಣಾಮ ಬೀರಿದೆ.

ಶಾಲಾ ಕೊಠಡಿಗಳು ಕುಸಿದು ಬಿದ್ದಿರುವುದರಿಂದ ಜಿಲ್ಲೆಯ ಬಹುತೇಕ ಕಡೆ ಮಕ್ಕಳ ಕಲಿಕೆಯ ಮೇಲೆ ಪರಿಣಾಮ ಬೀರಿರುವುದು ಎದ್ದುಕಾಣುತ್ತದೆ. ಕೆಲವು ಕಡೆ ಕೊಠಡಿಗಳ ಕೊರತೆಯಿಂದ ಒಂದು ಕಡೆ ಎರಡೆರಡು ತರಗತಿ ಮಕ್ಕಳನ್ನು ಕೂಡಿಸಿದ್ದರೆ ಇನ್ನು ಕೆಲವು ಕಡೆ ಶಾಲೆಯ ಕಚೇರಿಯಲ್ಲಿ ಮಕ್ಕಳನ್ನು ಕೂಡಿಸಿ ತರಗತಿ ನಡೆಸಲಾಗುತ್ತಿದೆ. ಮೊದಲೇ ಕೊಠಡಿಗಳ ಕೊರತೆ ಎದುರಿಸುತ್ತಿರುವ ಶಾಲೆಗಳಲ್ಲಿ ಇದು ಇನ್ನಷ್ಟು ಸಮಸ್ಯೆ ಹೆಚ್ಚಿಸಿದೆ.


Spread the love

About Laxminews 24x7

Check Also

ಸಹಾಯವಾಣಿಗೆ ಕರೆ ಮಾಡಿ ತನ್ನ ಬಾಲ್ಯ ವಿವಾಹ ತಡೆದ ಬಾಲಕಿ: ವಿದ್ಯಾಭ್ಯಾಸಕ್ಕೆ ಬೆಳಕಾದ ತಹಶೀಲ್ದಾರ್

Spread the loveವಿಜಯನಗರ: ಬಾಲಕಿಯೊಬ್ಬಳು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ತನ್ನ ಬಾಲ್ಯ ವಿವಾಹವನ್ನು ತಾನೇ ತಡೆದ ಘಟನೆ ಜಿಲ್ಲೆಯ ಹಗರಿಬೊಮ್ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ