Breaking News
Home / ರಾಜಕೀಯ / ಶಾಲೆಗಳಿಗೆ ದಸರಾ ರಜೆ ಅವಧಿ ಬದಲಾವಣೆ : ಮಹತ್ವದ ಆದೇಶ

ಶಾಲೆಗಳಿಗೆ ದಸರಾ ರಜೆ ಅವಧಿ ಬದಲಾವಣೆ : ಮಹತ್ವದ ಆದೇಶ

Spread the love

ಬೆಂಗಳೂರು : ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಶಾಲೆಗಳಿಗೆ ರಜೆ ಅವಧಿಯಲ್ಲಿ (Dussehra School Holiday change) ಮಾರ್ಪಾಡು ಮಾಡಲಾಗಿದೆ. ಸಪ್ಟೆಂಬರ್‌ 26ರಿಂದ ಅಕ್ಟೋಬರ್‌ 9 ವರೆಗೆ ದಸರಾ ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ.

 

ರಾಜ್ಯದಲ್ಲಿ ಅಕ್ಟೋಬರ್‌ 3ರಿಂದ ದಸರಾ ರಜೆ ನೀಡುವಂತೆ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿತ್ತು. ಆದ್ರೆ ಈ ಬಾರಿ ಸಪ್ಟೆಂಬರ್‌ 26 ರಿಂದ ನಾಡಹಬ್ಬ ದಸರಾ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ನವರಾತ್ರಿಯ ವೇಳೆಯಲ್ಲಿ ಮಕ್ಕಳಿಗೆ ರಜೆಯನ್ನು ನೀಡುವಂತೆ ಒತ್ತಡ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲೀಗ ಮೈಸೂರು ಜಿಲ್ಲೆಯ ಶಾಲೆಗಳಿಗೆ ಸಪ್ಟೆಂಬರ್‌ 26ರಿಂದ ಅಕ್ಟೋಬರ್‌ 9ರ ವರೆಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಆದ್ರೆ ಗಾಂಧಿ ಜಯಂತಿ, ವಾಲ್ಮೀಕಿ ಜಯಂತಿಯ ಆಚರಣೆಯನ್ನು ಕಡ್ಡಾಯವಾಗಿ ಆಚರಿಸುವಂತೆ ಸೂಚನೆಯನ್ನು ನೀಡಲಾಗಿದೆ.

ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿಯೇ ಮಧ್ಯವಾರ್ಷಿಕ ರಜೆಯನ್ನು ಮಂಜೂರು ಮಾಡುವಂತೆ ಒತ್ತಡ ಕೇಳಿಬಂದ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ರಜೆಯ ಅವಧಿಯನ್ನು ಮಾರ್ಪಾಡು ಮಾಡಿ ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೇ ಮೈಸೂರು ಜಿಲ್ಲೆಯಲ್ಲಿಯೂ ದಸರಾ ರಜೆಯನ್ನು ಮಾರ್ಪಾಡು ಮಾಡಲಾಗಿದೆ.


Spread the love

About Laxminews 24x7

Check Also

170 ಲಕ್ಷ ಕೋಟಿ ಮೀರಿದ ಕೇಂದ್ರದ ಸಾಲ

Spread the love ಕೇಂದ್ರ ಸರ್ಕಾರದ ಒಟ್ಟು ಸಾಲವು 2024ರ ಮಾರ್ಚ್‌ ಅಂತ್ಯದ ವೇಳೆಗೆ ₹171.78 ಲಕ್ಷ ಕೋಟಿಗೆ ಏರಿಕೆಯಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ