Breaking News

’40 ಪರ್ಸೆಂಟ್ ಕಮಿಷನ್ ಸಿಎಂಗೆ ಸುಸ್ವಾಗತ’: ಬ್ಯಾನರ್ ಹಾಕಿ ಕರ್ನಾಟಕ ಮುಖ್ಯಮಂತ್ರಿ ಗುರಿಯಾಗಿಸಿದ ಟಿಆರ್ ಎಸ್

Spread the love

ಹೈದರಾಬಾದ್: ಸಿಕಂದರಾಬಾದ್ ನ ಪರೇಡ್ ಮೈದಾನದ ಬಳಿ ‘40% ಕಮಿಷನ್ ಸಿಎಂಗೆ ಸುಸ್ವಾಗತ’ ಎಂಬ ಬ್ಯಾನರ್ ಹಾಕುವ ಮೂಲಕ ಆಡಳಿತಾರೂಢ ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್ ಎಸ್) ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗುರಿಯಾಗಿಸಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೆಲಂಗಾಣಕ್ಕೆ ಭೇಟಿ ನೀಡಿದ್ದು, ಇಂದು ಪರೇಡ್ ಮೈದಾನದಲ್ಲಿ ಹೈದರಾಬಾದ್ ಲಿಬರೇಶನ್ ಡೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಈ ಸಮಯದಲ್ಲಿ ಈ ಬ್ಯಾನರ್ ಹಾಕಲಾಗಿದೆ ಎಂದು ತಿಳಿದು ಬಂದಿದೆ.

 

ಕರ್ನಾಟಕ ಸರಕಾರದ ವಿರುದ್ಧ ಗುತ್ತಿಗಾರರ ಸಂಘದ ಅಧ್ಯಕ್ಷ 40% ಕಮಿಷನ್ ಆರೋಪ ಮಾಡಿದ್ದು ದೇಶಾದ್ಯಂತ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಟೀಕೆಗೆ ಕಾರಣವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ