Breaking News

ದೇಶಕ್ಕಾಗಿ ಕಾವಲುಗಾರ ಯಾವ ಕೆಲಸ ಮಾಡಿದ್ದಾರೆ?: ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Spread the love

ಮೈಸೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ನಿಮ್ಮನ್ನು ದೇಶದ ಕಾವಲುಗಾರ ಅಂತಾರೆ. ಆದರೆ, ನೀವು ಯಾವ ಚೌಕಿದಾರ್ ಕೆಲಸ ಮಾಡುತ್ತಿದ್ದೀರಾ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಕಚೇರಿ ಆವರಣದಲ್ಲಿ ನಡೆದ ಭಾರತ್ ಜೋಡೋ ಪೂರ್ವಭಾವಿ ಸಭೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು 40 ವರ್ಷದಿಂದ ರಾಜಕಾರಣದಲ್ಲಿದ್ದೇನೆ, ಇಂತಹ ಭ್ರಷ್ಟ ಸರ್ಕಾರ ನೋಡಿಲ್ಲ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಯುವಕರಿಗೆ ಉದ್ಯೋಗ ‌ಕೊಟ್ಟಿಲ್ಲ, ಪಿಎಸ್ಐ ನೇಮಕಾತಿಯಲ್ಲಿ 300 ಕೋಟಿ ಲೂಟಿ ಮಾಡಿದ್ದಾರೆ. ಬಿಜೆಪಿಗೆ ಮಾನ ಮರ್ಯಾದೆ ಇಲ್ಲ. 40% ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಕೆಂಪಣ್ಣ ಮೋದಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆ ಮಾಡಿ ನ್ಯಾಯ ಕೊಡಿಸಬೇಕು, ಆದ್ರೆ ಈವರೆಗೂ ಪತ್ರದ ಬಗ್ಗೆ ಏನೂ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.


Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ