Home / ರಾಜಕೀಯ / ಮೈಸೂರು ದಸರಾ 2022: ಪ್ರವಾಸಿಗರಿಗಾಗಿ ಕಾಂಬೋ ಟಿಕೆಟ್ ವ್ಯವಸ್ಥೆ ಜಾರಿ

ಮೈಸೂರು ದಸರಾ 2022: ಪ್ರವಾಸಿಗರಿಗಾಗಿ ಕಾಂಬೋ ಟಿಕೆಟ್ ವ್ಯವಸ್ಥೆ ಜಾರಿ

Spread the love

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ, ವತಿಯಿಂದ ಏಕೀಕೃತ ಟಿಕೆಟ್ (ಕಾಂಬೋ ಟಿಕೆಟ್) ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಏಕೀಕೃತ ಟಿಕೆಟ್ ಪಡೆಯುವುದರಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರು 5 ಪ್ರವಾಸಿ ಸ್ಥಳಗಳಾದ ಮೈಸೂರು ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ರೈಲ್ವೆ ಮ್ಯೂಸಿಯಂ ಹಾಗೂ ಕೆ ಆರ್ ಎಸ್ ಬೃಂದಾವನಕ್ಕೆ ತೆರಳಬಹುದು. ಪ್ರವಾಸಿಗರು ಈ ಏಕೀಕೃತ ಟಿಕೆಟ್ ಪಡೆಯುವುದರಿಂದ, 5 ಸ್ಥಳಗಳಲ್ಲಿ ಟಿಕೆಟ್​ಗಾಗಿ ಸರದಿ ಸಾಲಿನಲ್ಲಿ ನಿಲ್ಲುವ ಅಗತ್ಯವಿರುವುದಿಲ್ಲ.

ಏಕೀಕೃತ ಟಿಕೆಟ್​​ ವ್ಯವಸ್ಥೆಯು 2022ರ ಸೆಪ್ಟಂಬರ್ 20ರಂದು ಆರಂಭಗೊಂಡು, ಅಕ್ಟೋಬರ್ 05ರ ವರೆಗೆ ಚಾಲ್ತಿಯಲ್ಲಿರುತ್ತದೆ. ಒಂದು ಟಿಕೆಟ್ ಬೆಲೆ 500 ರೂ.ಗಳಾಗಿದ್ದು, ಮಕ್ಕಳಿಗೆ ಟಿಕೆಟ್ ದರವನ್ನು 250 ರೂ.ಗಳಿಗೆ ನಿಗದಿಪಡಿಸಲಾಗಿದೆ.ಏಕೀಕೃತ ಟಿಕೆಟ್​ನನ್ನು ಪ್ರವಾಸಿ ಇಲಾಖೆಯ ವತಿಯಿಂದ ಮಾರಾಟ ಮಾಡಲಾಗುತ್ತಿದೆ. ಕೆಎಸ್​ಟಿಡಿಇ ಹೋಟೆಲ್ ಹಾಗೂ ಟ್ರಾವೆಲ್ಸ್ ವಿಭಾಗದಲ್ಲಿ, ಕೆ ಎಸ್ಆರ್​​ಟಿಸಿ ಸಬರ್ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ, ರೈಲ್ವೆ ನಿಲ್ದಾಣದ 02 ಕಡೆ, ಚಾ.ಬೆಟ್ಟ, ಮೃಗಾಲಯ, ಕೆಆರ್​​ಎಸ್, ಅರಮನೆ ಹಾಗೂ ಮೈಸೂರು ನಗರದ ಪ್ರಮುಖ ಹೋಟೆಲ್​ಗಳಲ್ಲಿ ಟಿಕೆಟ್ ಲಭ್ಯವಿರಲಿದೆ. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ