Breaking News
Home / ರಾಜಕೀಯ / ಹುಬ್ಬಳ್ಳಿಗೆ ಭೇಟಿ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು

ಹುಬ್ಬಳ್ಳಿಗೆ ಭೇಟಿ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು

Spread the love

ಹುಬ್ಬಳ್ಳಿ, ಸೆಪ್ಟೆಂಬರ್‌, 19: ಸೆಪ್ಟೆಂಬರ್ 26ರಂದು ರಾಷ್ಟ್ರಪತಿ ದ್ರೌಪದಿ‌ ಮುರ್ಮು ಅವರು ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಅವರು ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹುಬ್ಬಳ್ಳಿ ಧಾರವಾಡ ನಗರಕ್ಕೆ ಭೇಟಿ ನೀಡಲಿದ್ದಾರೆ.

ಈ ಬಾರಿ ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ನೀಡಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾಗೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ವಾಣಿಜ್ಯ ನಗರಿ‌ ಹುಬ್ಬಳ್ಳಿಗೂ ಭೇಟಿ ನೀಡಲಿದ್ದಾರೆ.

 

ರಾಷ್ಟ್ರಪತಿಯವರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ‌ಪಾಲಿಕೆಯಿಂದ ಪೌರಸನ್ಮಾನ ಏರ್ಪಡಿಸಲಾಗಿದೆ.‌ ಅವರಿಗೆ ನೆನಪಿನ ಕಾಣಿಕೆಯಾಗಿ ಸಿದ್ಧಾರೂಢರ 1.5 ಕೆ.ಜಿ ಬೆಳ್ಳಿಯ ಮೂರ್ತಿಯನ್ನು ನೀಡಲಾಗುತ್ತದೆ. ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಜಿಮ್‌ ಖಾನಾ ಮೈದಾನದಲ್ಲಿ‌ 70 ನಿಮಿಷಗಳ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಅಂದಿನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಪೌರಸನ್ಮಾನ ಕಾರ್ಯಕ್ರಮದಲ್ಲಿ 5 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ. 500 ಜನ ಪೌರ ಕಾರ್ಮಿಕರಿಗೆ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗಿದೆ. ಬಳಿಕ ಧಾರವಾಡ ಐಐಟಿಗೆ ಭೇಟಿ ನೀಡಿ 400 ವಿದ್ಯಾರ್ಥಿಗಳ ಜೊತೆಗೆ ಅವರು ಸಂವಾದ ನಡೆಸಲಿದ್ದಾರೆ ಎಂದರು.


Spread the love

About Laxminews 24x7

Check Also

ಕಲ್ಲಿದ್ದಲು ಆಮದು ಶೇ 13.2ರಷ್ಟು ಹೆಚ್ಚಳ

Spread the love ನವದೆಹಲಿ: ಏಪ್ರಿಲ್‌ ತಿಂಗಳಲ್ಲಿ 2.61 ಕೋಟಿ ಟನ್‌ ಕಲ್ಲಿದ್ದಲು ದೇಶಕ್ಕೆ ಆಮದಾಗಿದೆ ಎಂದು ಇ-ವಾಣಿಜ್ಯ ಸಂಸ್ಥೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ