Breaking News
Home / ರಾಜಕೀಯ / ʼತೆಲಂಗಾಣದಲ್ಲಿ 40 ಶೇ. ಸಿಎಂ ಫ್ಲೆಕ್ಸ್ ಹಾಕಿರುವುದು ಒಂದು ವ್ಯವಸ್ಥಿತ ಷಡ್ಯಂತ್ರʼ

ʼತೆಲಂಗಾಣದಲ್ಲಿ 40 ಶೇ. ಸಿಎಂ ಫ್ಲೆಕ್ಸ್ ಹಾಕಿರುವುದು ಒಂದು ವ್ಯವಸ್ಥಿತ ಷಡ್ಯಂತ್ರʼ

Spread the love

ಬೆಂಗಳೂರು : ತೆಲಂಗಾಣದಲ್ಲಿ 40 ಶೇ. ಸರ್ಕಾರ ಎಂಬ ಫ್ಲೆಕ್ಸ್‌ಗಳನ್ನು ಹಾಕಿರುವುದು ಒಂದು ವ್ಯವಸ್ಥಿತ ಷಡ್ಯಂತ್ರ. ನಮ್ಮ ರಾಜ್ಯದ ಬಗ್ಗೆ ತೆಲಂಗಾಣದಲ್ಲಿ ಹಾಕುವುದು ಎಷ್ಟು ಸಮಂಜಸ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

 

ಅವರು ಇಂದು ಕೃಷ್ಣಾದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದರು. ತೆಲಂಗಾಣದಲ್ಲಿಯೂ40 ಶೇ. ಸರ್ಕಾರಎಂಬ ಫ್ಲೆಕ್ಸ್‌ಗಳನ್ನು ಅಳವಡಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು ಈ ಬಗ್ಗೆ ನನಗೆ ಗೊತ್ತಿಲ್ಲ. ಇದೊಂದು ವ್ಯವಸ್ಥಿತ ಷಡ್ಯಂತ್ರ. ನಮ್ಮ ರಾಜ್ಯದ ಬಗ್ಗೆ ತೆಲಂಗಾಣದಲ್ಲಿ ಹಾಕುವುದು ಎಷ್ಟು ಸಮಂಜಸ? ಇದನ್ನು ಖಾಸಗಿಯವರು ಮಾಡಿದ್ದಾರೋ ಅಥವಾ ಸರ್ಕಾರ ಹಾಕಿರುವುದೋ ನನಗೆ ಗೊತ್ತಿಲ್ಲ. ಇಂತಹ ಬೆಳವಣಿಗೆಗಳು ಉಭಯರಾಜ್ಯಗಳ ಸೌಹಾರ್ದತೆಗೆ ಧಕ್ಕೆ ತರುತ್ತವೆ ಎಂದು ಕಳವಳ ವ್ಯಕ್ತಪಡಿಸಿದರು.

 

ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಅಭಿವೃದ್ಧಿ ಬೇಕಾಗಿಲ್ಲ

ನಿನ್ನೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5,000 ಕೋಟಿ ರೂ. ಅನುದಾನವನ್ನು ಮುಂದಿನ ಆಯವ್ಯಯದಲ್ಲಿ ಒದಗಿಸುವುದಾಗಿ ಅತ್ಯಂತ ಬದ್ಧತೆಯಿಂದಲೇ ಘೋಷಿಸಿದ್ದೇನೆ. ಕಳೆದ ವರ್ಷ 3,000 ಕೋಟಿ ರೂ. ಅನುದಾನ ಘೋಷಿಸಿದ್ದೆನು. ಅದನ್ನು ಆಯವ್ಯಯದಲ್ಲಿ ಒದಗಿಸಲಾಗಿದೆ. ಪ್ರಿಯಾಂಕ್ ಖರ್ಗೆ ಅವರು ಇದನ್ನು ಸ್ವಾಗತಿಸಬೇಕಾಗಿತ್ತು. ಆದರೆ ಅವರು ವಿರೋಧಿಸಿರುವುದನ್ನು ನೋಡಿದರೆ, ಈ ಪ್ರದೇಶ ಸದಾ ಹಿಂದುಳಿದಿರಲಿ ಎಂಬುದೇ ಅವರ ಇಚ್ಛೆಯಾ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ಮುಂದಾದಾಗ ಎಲ್ಲರೂ ಅದಕ್ಕೆ ತಕ್ಕಂತೆ ಕೆಲಸ ಮಾಡಬೇಕು. ಇದರಲ್ಲಿ ರಾಜಕಾರಣದ ಮಾತಾಡುವುದು ಸರಿಯಲ್ಲ ಎಂದು ಸಿಎಂ ತಿಳಿಸಿದರು.

ಎಲ್ಲದಕ್ಕೂ ರಾಜಕಾರಣ ಸಲ್ಲದು

ಬಳ್ಳಾರಿಯ ವಿಮ್ಸ್ ಘಟನೆಗೆ ಸಚಿವ ಡಾ. ಸುಧಾಕರ್ ಹೊಣೆ ಹೊರಬೇಕು ಎಂದು ಕಾಂಗ್ರೆಸ್ ಹೇಳಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಹಿಂದೆ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಕರ್ನಾಟಕ ಖಾಸಗಿ ವೈದ್ಯರ ಮಸೂದೆಯನ್ನು ಮಂಡಿಸಿತ್ತು. ಇದನ್ನು ವಿರೋಧಿಸಿ, ರಾಜ್ಯದಾದ್ಯಂತ ಖಾಸಗಿ ವೈದ್ಯರು 5 ದಿನಗಳ ಕಾಲ ಮುಷ್ಕರ ನಡೆಸಿದ್ದರಿಂದ ಸುಮಾರು 80 ಜನರು ಮೃತಪಟ್ಟರು. ಆಗ ಅಂದಿನ ಆರೋಗ್ಯ ಸಚಿವರು ರಾಜೀನಾಮೆ ನೀಡಿದ್ದಾರಾ? ಎಂದು ತಿರುಗೇಟು ನೀಡಿದರು. ಎಲ್ಲದಕ್ಕೂ ರಾಜಕಾರಣ ಮಾಡುವ ಪ್ರವೃತ್ತಿ ಕಾಂಗ್ರೆಸ್ನದ್ದು ಎಂದು ನುಡಿದರು.


Spread the love

About Laxminews 24x7

Check Also

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

Spread the love ಪಣಜಿ: ಝೋಸ್ಕಾ ಆಯಪ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವುದಾಗಿ ಹೇಳಿ ಮಹಿಳೆಯೊಬ್ಬರು 2.71 ಲಕ್ಷ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ