ಬೆಂಗಳೂರು: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿದ್ದಾರೆ. ಇಂದು 12 ಗಂಟೆ ಸುಮಾರಿಗೆ ಇ.ಡಿ.ಕಚೇರಿಗೆ ಹಾಜರಾಗಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ಗೆ ಇ.ಡಿ ಅಧಿಕಾರಿಗಳು ಬುಲಾವ್ ನೀಡಿದ್ದಾರೆ. ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದ ಇ.ಡಿ, ಈಗಾಗಲೇ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ನ್ಯಾಯಾಲಯದಲ್ಲಿ ಇದರ ವಿಚಾರಣೆ ಕೂಡ ಪ್ರಗತಿಯಲ್ಲಿದೆ. ಈ ನಡುವೆ ಜಾರಿ ನಿರ್ದೇಶನಾಲಯ ಹೆಚ್ಚುವರಿಯಾಗಿ ಎಫ್ಐಆರ್ ದಾಖಲಿಸಿದ್ದು, ಅದಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ನೋಟಿಸ್ ನೀಡಿತ್ತು. ಅದರ ಅನುಸಾರ ಡಿ. ಕೆ ಶಿವಕುಮಾರ್ ವಿಚಾರಣೆ ಎದುರಿಸಲಿದ್ದಾರೆ.