Breaking News

FDA ಕೆಲಸ ಕೊಡಿಸುವುದಾಗಿ ವಂಚನೆ; ಲೇಡಿ PSI ಅಶ್ವಿನಿ ಸಸ್ಪೆಂಡ್

Spread the love

ಮೈಸೂರು: ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಲೇಡಿ ಪಿ ಎಸ್ ಐ ಅಶ್ವಿನಿಯನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

ಮೈಸೂರಿನ ನರಸಿಂಹರಾಜ ಸಂಚಾರಿ ಪೊಲೀಸ್ ಠಾಣೆ ಪಿಎಸ್‌ಐ ಆಗಿರುವ ಅಶ್ವಿನಿ ಅನಂತಪುರ 2020ರಲ್ಲಿ ನಡೆದ ಎಫ್ ಡಿ ಎ ಪರೀಕ್ಷೆಯಲ್ಲಿ ಆಯ್ಕೆ ಮಾಡಿಸುವುದಾಗಿ ಹೇಳಿ ಬಾಗಲಕೋಟೆ ಜಿಲ್ಲೆಯ ಚಿಕ್ಕಲಗಿ ಗ್ರಾಮದ ಬಸವರಾಜ್ ಝಳಕಿ ಎಂಬುವರಿಂದ ಹಣ ಪಡೆದು ವಂಚಿಸಿದ್ದರು.

 

ಬಸವರಾಜ್ ಸಹೋದರ ಸಂಗಮೇಶ್ ಜೊತೆ ಅಶ್ವಿನಿ ಡೀಲ್ ಮಾಡಿದ್ದು ಹಾಗೂ ಹಣದ ವ್ಯವಹಾರದ ಬಗ್ಗೆ ಅವರೊಂದಿಗೆ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಅಶ್ವಿನಿ 15 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 2 ಲಕ್ಷ ಪಡೆದಿದ್ದರು. ಕೆಲಸ ಸಿಗದಿದ್ದಾಗ ಹಣ ವಾಪಸ್ ಕೇಳಿದ್ದಕ್ಕೆ ಅಶ್ವಿನಿ ಆವಾಜ್ ಹಾಕಿದ್ದರು. ಇತ್ತೀಚೆಗೆ ಅಶ್ವಿನಿ ಹಾಗೂ ಸಂಗಮೇಶ್ ನಡುವಿನ ಆಡಿಯೋ ಸಂಭಾಷಣೆ ವೈರಲ್ ಆಗಿತ್ತು. ಇದೀಗ ಪ್ರಕರಣ ಸಂಬಂಧ ಪಿಎಸ್‌ಐ ಅಶ್ವಿನಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.


Spread the love

About Laxminews 24x7

Check Also

ಅಡಿಕೆ ಸಾಗಿಸುತ್ತಿದ್ದ VRL ಲಾರಿ ತೋಟಕ್ಕೆ ಉರುಳಿ ಸಂಪೂರ್ಣ ಜಖಂ!

Spread the loveಶಿರಸಿ:ಶಿರಸಿಯಿಂದ ಹುಬ್ಬಳ್ಳಿಗೆ ಅಡಿಕೆ ಸಾಗಿಸುತ್ತಿದ್ದ VRL ಸಂಸ್ಥೆಗೆ ಸೇರಿದ ಲಾರಿಯೊಂದು ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ