ಹಾವೇರಿ: ಅಗ್ನಿಪಥ್ ಯೋಜನೆಯಡಿ ಹಾವೇರಿಯಲ್ಲಿ ಕಳೆದ ಹದಿನೆಂಟು ದಿನಗಳಿಂದ ಜರುಗಿದ್ದ ಅಗ್ನಿವೀರರ ನೇಮಕಾತಿ ಯಶಸ್ವಿಯಾಗಿ ಪೂರ್ಣಗೊಂಡಿದೆ. 43 ಸಾವಿರ ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಿದ್ದು, ಈ ಪೈಕಿ 4,200 ಅಭ್ಯರ್ಥಿಗಳು ಲಿಖೀತ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.
ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ರವಿವಾರ ಸೇನಾ ನೇಮಕಾತಿ ವಿಭಾಗದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾಹಿತಿ ನೀಡಿದರು. ಸತತ ಮಳೆಯ ಕಾರಣ ಸೇನಾ ನೇಮಕಾತಿ ರ್ಯಾಲಿ ಆಯೋಜಿಸುವುದು ಸವಾಲಿನ ಕೆಲಸವಾಗಿತ್ತು. ಆದಾಗ್ಯೂ ಜಿಲ್ಲೆಯ ಅಧಿಕಾರಿಗಳು, ನಾಗರಿಕರು, ಮಾಧ್ಯಮ ಪ್ರತಿನಿಧಿಗಳು ಹಾಗೂ ಸೇನಾ ನೇಮಕಾತಿ ವಿಭಾಗದ ಅಧಿಕಾರಿಗಳ ಅಭೂತಪೂರ್ವ ಸಹಕಾರದಿಂದ ನೇಮಕಾತಿ ಪ್ರಕ್ರಿಯೆಗೆ ತಡೆ ಇಲ್ಲದಂತೆ ಯಶಸ್ವಿಯಾಗಿ ಜರುಗಿದೆ.
Laxmi News 24×7