Breaking News

ರಾಮದುರ್ಗ: ಮಾರಕಾಸ್ತ್ರಗಳಿಂದ ವ್ಯಕ್ತಿ ಕೊಲೆ

Spread the love

ರಾಮದುರ್ಗ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹೊಸೂರ ಗ್ರಾಮದ ಬಳಿ ಸೋಮವಾರ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಪೂಲ್ ಕೆಳಗೆ ಬಿಸಾಕಲಾಗಿದೆ.

ಪಾಂಡಪ್ಪ ದುಂಡಪ್ಪ ಜಟಕನ್ನವರ (35) ಕೊಲೆಯಾದವರು. ಬೇರೆಡೆ ಕೊಲೆಗೈದು ಹೊಸೂರ ಹಳ್ಳದ ಬಳಿ ಶವ ಎಸೆಯಲಾಗಿದೆ.

ವ್ಯಕ್ತಿಯ ಮೈತುಂಬ ಮಾರಕಾಸ್ತ್ರಗಳಿಂದ ಕೊಚ್ಚಲಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಜನ ಬೆಚ್ಚಿದರು. ಸ್ಥಳದಲ್ಲಿ ಅವರ ಬೈಕ್ ಕೂಡ ಇದೆ.

ಕಟಕೋಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು. ಶವವನ್ನು ಮರಣೋತ್ತರ ಪರೀಕ್ಷೆಗೆ ರಾಮದುರ್ಗ ತಾಲ್ಲೂಕು ಆಸ್ಪತ್ರೆಗೆ ಸಾಗಿಸಲಾಯಿತು.

ಕೊಲೆಗೆ ಕಾರಣ ಹಾಗೂ ಆರೋಪಿಗಳ ಸುಳಿವು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ