Breaking News
Home / ರಾಜಕೀಯ / ಬೆಳಗಾವಿ ತಾಲೂಕಿನ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

ಬೆಳಗಾವಿ ತಾಲೂಕಿನ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Spread the love

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ, ಬೆಳಗಾವಿ ತಾಲೂಕಿನ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಬೆಳಗಾವಿ ನಗರದಲ್ಲಿ ಇಂದು ಮಂಗಳವಾರ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಕೂಲಿ ಕಾರ್ಮಿಕರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ತಲೆಯ ಮೇಲೆ ಬುಟ್ಟಿ, ಕೂಲಿ ಕೆಲಸದ ಸಾಮಗ್ರಿ ಹಿಡಿದು ಪ್ಲೇಟ್ ಬಾರಿಸುತ್ತ, ಕಾಯಕ ಬಂಧು ಗೌರವಧನ ಹೆಚ್ಚಳ, 200 ದಿನಗಳ ಕೂಲಿ ನೀಡುವುದು, ಸಲಕರಣೆ ವೆಚ್ಚ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದರು. ಈ ವೇಳೆ ನಗರದ ರಾಣಿ ಚೆನ್ನಮ್ಮಾ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುತ್ತಿರುವ ಬೆಳಗಾವಿ ಜಿಲ್ಲೆಯ 8 ತಾಲೂಕಿನ ಕೂಲಿ ಕಾರ್ಮಿಕರು ಈ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ನಮಗೆ 200 ದಿನಗಳ ಕೂಲಿ ನೀಡಬೇಕು. ಕೆಲಸ ಮಾಡಿದ 15 ದಿನಗಳಲ್ಲಿ ಕಾನೂನು ರೀತಿ ಕೂಲಿ ಪಾವತಿ ಮಾಡಬೇಕು. ಇತ್ತೀಚೆಗೆ ಕೂಲಿಯನ್ನು ಎರಡು ತಿಂಗಳಿಗೊಮ್ಮೆ ನೀಡಲಾಗುತ್ತಿದೆ. ಸರಕಾರ ಕೂಲಿ ಕಾರ್ಮಿಕರಿಗೆ ಕೊಡುತ್ತಿದ್ದ ಸಲಕರಣೆ ವೆಚ್ಚವನ್ನು 3 ತಿಂಗಳಿನಿಂ ನಿಲ್ಲಿಸಿದೆ. ಅದನ್ನು ಮತ್ತೆ ಪ್ರಾರಂಭಿಸಿ ಅದನ್ನು 25 ರೂಗೆ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿದರು. ಈ ಕುರಿತಂತೆ ಸರಕಾರ ಬಜೆಟ್‍ನ್ನು ಕೂಡ ಹೆಚ್ಚಿಗೆ ಮಾಡಬೇಕು. ಇನ್ನು ಕೆಲವು ವೇಳೆ ಸರಿಯಾಗಿ ಕೆಲಸ ನೀಡುವುದಿಲ್ಲ. ಇದರಿಂದ ಕೂಲಿ ಕಾರ್ಮಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಕೂಡಲೇ ಈ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ