Breaking News
Home / Uncategorized / ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ

ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ

Spread the love

ಬೆಂಗಳೂರು: ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು, ಹಿಂದಿ ಸೇರಿದಂತೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಲನಚಿತ್ರ ಗೀತೆಗಳಿಗೆ ಹಿನ್ನೆಲೆಗಾಯನ ಮಾಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು. ನಟನೆ, ಸಂಗೀತ ಸಂಯೋಜನೆ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯನ್ನೂ ಮಾಡಿ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದರು. ಹತ್ತಕ್ಕಿಂತ ಹೆಚ್ಚು ಭಾಷೆಗಳಲ್ಲಿ 40 ಸಾವಿರಕ್ಕೂ ಮೀರಿ ಹಾಡುಗಳನ್ನು ಹಾಡಿದ ಕೀರ್ತಿ ಅವರದ್ದು ಎಂದು ಎಸ್‍ಪಿಬಿ ಸಾಧನೆಯ ಬಗ್ಗೆ ಹೇಳಿದ್ದಾರೆ.ಕನ್ನಡ ಮತ್ತು ಕನ್ನಡಿಗರ ಬಗ್ಗೆ ವಿಶೇಷ ಅಭಿಮಾನವನ್ನು ಹೊಂದಿದ್ದರು. ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ ಹಾಗೂ ಇನ್ನಿತರ ಪ್ರಶಸ್ತಿ ಗೌರವಗಳನ್ನು ಪಡೆದ ಸುಪ್ರಸಿದ್ಧ ಗಾಯಕರು. ಅವರ ಹಾಡುಗಳು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ನೆಲೆಸಿದೆ. ಆದರೆ ಇದೀಗ ಅವರ ನಿಧನದಿಂದ ಸಂಗೀತ ಕ್ಷೇತ್ರದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ ಎಂದಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಕುಟುಂಬ ಮತ್ತು ಕೋಟ್ಯಾಂತರ ಅಭಿಮಾನಿಗಳಿಗೆ ಭಗವಂತ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಹಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್‍ಪಿಬಿ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಸುಮಾರು 1.4 ನಿಮಿಷಕ್ಕೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಅವರ ಮಗ ಚರಣ್ ಅಧಿಕೃತವಾಗಿ ತಿಳಿಸಿದ್ದರು.


Spread the love

About Laxminews 24x7

Check Also

ಶಾಲಾರಂಭಕ್ಕೆ ಭರದ ಸಿದ್ಧತೆ

Spread the love ಉಡುಪಿ: ಉಭಯ ಜಿಲ್ಲೆಗಳಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಮೇ 29ರಿಂದ 2024-25ನೇ ಸಾಲಿನ ಶೈಕ್ಷಣಿಕ ತರಗತಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ