Breaking News

2015- 16ರ ಶಿಕ್ಷಕರ ಅಕ್ರಮ ನೇಮಕ ಪ್ರಕರಣ ಸಿಐಡಿ ತನಿಖೆಗೆ: ಸಚಿವ ಬಿ.ಸಿ.ನಾಗೇಶ್

Spread the love

ವಿಧಾನಸಭೆ: 2015- 16ರಲ್ಲಿ ನಡೆದ ಶಿಕ್ಷಕರ ಅಕ್ರಮ ನೇಮಕ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಗೆ ತಿಳಿಸಿದ್ದಾರೆ.

ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಪಿ.ರಾಜೀವ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, 2015- 16ರಲ್ಲಿ ಇದಕ್ಕಿದ್ದಂತೆ ಒಂದಿಷ್ಟು ಜನರನ್ನು ಯಾವುದೇ ಪರೀಕ್ಷೆ ನಡೆಸದೇ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.

ಪತ್ರಿಕೆಯಲ್ಲಿ ವರದಿ ಬಂದ ನಂತರ ನಾವು ಪ್ರಾಥಮಿಕ ತನಿಖೆ ನಡೆಸಿದಾಗ ಬೆಂಗಳೂರು ವಿಭಾಗದಲ್ಲಿ 16 ಜನರು ಈ ರೀತಿ ನೇಮಕ ಆದೇಶ ಪಡೆದಿರುವುದು ಗೊತ್ತಾಗಿದೆ. ಮತ್ತಷ್ಟು ವಿಚಾರಣೆ ನಡೆಸಿದಾಗ 35 ಜನರು ಈ ರೀತಿ ನೇಮಕ ಆದೇಶ ಪಡೆದಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗಿದೆ. ರಾಜ್ಯಾದ್ಯಂತ ಈ ರೀತಿ ಘಟನೆ ನಡೆದಿರುವ ಸಾಧ್ಯತೆ ಇದ್ದು, ಸಮಗ್ರ ತನಿಖೆ ನಡೆಸುತ್ತೇವೆ. ಇದು ಸಮಾಜವೇ ತಲೆತಗ್ಗಿಸುವ ಪ್ರಕರಣ ಎಂದು ಅಭಿಪ್ರಾಯಪಟ್ಟರು.

 

ಆದರ ಇಷ್ಟಕ್ಕೆ ಸುಮ್ಮನಾಗದ ಬಿಜೆಪಿ ಶಾಸಕರು, ಈ ಹಗರಣ ಯಾರ ಕಾಲದಲ್ಲಿ ನಡೆದಿದೆ? ಯಾರೆಲ್ಲ ಭಾಗಿಯಾಗಿದ್ದಾರೆಂಬುದು ಗೊತ್ತಾಗಬೇಕು ಎಂದು ಆಗ್ರಹಿಸಿದರು.

ಇಂದು ಕಾಂಗ್ರೆಸ್ ಸದಸ್ಯರು ಪಿಎಸ್ ಐ ನೇಮಕ ಹಗರಣ ಪ್ರಸ್ತಾಪ ಮಾಡುವ ಹಿನ್ನೆಲೆಯಲ್ಲಿ ಇದಕ್ಕೆ ಮಹತ್ವ ಲಭಿಸಿದೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ