Breaking News
Home / ರಾಜಕೀಯ / ಮೀಸಲಾತಿಗೆ ಯಡಿಯೂರಪ್ಪ ಅಡ್ಡಿ.. ಸಿಎಂ ಬೊಮ್ಮಾಯಿ ಮನೆ ಮುಂದೆ ಸತ್ಯಾಗ್ರಹಕ್ಕೆ ಕುಳಿತ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಯಡಿಯೂರಪ್ಪ ಅಡ್ಡಿ.. ಸಿಎಂ ಬೊಮ್ಮಾಯಿ ಮನೆ ಮುಂದೆ ಸತ್ಯಾಗ್ರಹಕ್ಕೆ ಕುಳಿತ ಬಸವಜಯ ಮೃತ್ಯುಂಜಯ ಸ್ವಾಮೀಜಿ

Spread the love

ಹಾವೇರಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಆಯೋಜಿಸಿರುವ ಸತ್ಯಾಗ್ರಹಕ್ಕೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಚಾಲನೆ ನೀಡಿದರು. ಶಿಗ್ಗಾಂವಿ ಪಟ್ಟಣದ ಸವಣೂರು ರಸ್ತೆಯಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ನಿವಾಸದ ಎದುರು ಆಯೋಜಿಸಿರುವ ಸತ್ಯಾಗ್ರಹಕ್ಕೆ ಶಾಲಾ ವಿದ್ಯಾರ್ಥಿಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಮೀಜಿ ಚಾಲನೆ ನೀಡಿದರು.

ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಲ್ಕು ಬಾರಿ ಮಾತು ಕೊಟ್ಟು ತಪ್ಪಿದ್ದಾರೆ. ನಾಲ್ಕನೇ ಬಾರಿ ಮಾತು ತಪ್ಪಿದರೆ ಸಿಎಂ ಮನೆ ಮುಂದೆ ಸತ್ಯಾಗ್ರಹ ಮಾಡ್ತೇವೆ ಅಂತಾ ಹೇಳಿದ್ವಿ. ಈಗ ಮಾತು ತಪ್ಪಿದ್ದರಿಂದ ಸತ್ಯಾಗ್ರಹ ಮಾಡ್ತಿದ್ದೇವೆ. ಮೀಸಲಾತಿ ಹೋರಾಟ ಈಗಾಗಲೆ ಬಹುದೊಡ್ಡ ಯಶಸ್ಸು ಕಂಡಿದೆ. ನಾವು ಬಹಳ ಮುಗ್ದ ಜನರು‌. ನಮ್ಮ ಜನರನ್ನು ತೋರಿಸಿ ಬೆಂಗಳೂರಿನಲ್ಲಿರುವ ಶೇಕಡಾ ಎರಡರಷ್ಟು ಜನರು ಅಧಿಕಾರ ಅನುಭವಿಸಿದರು.

ಯಡಿಯೂರಪ್ಪ ಅವರು ಮೀಸಲಾತಿ ಕೊಡ್ತೀನಿ ವೋಟು ಕೊಡಿ ಅಂದರು. ವೋಟು ಪಡೆದು ಅವರು ಅಧಿಕಾರಕ್ಕೆ ಬಂದರು. ಯಡಿಯೂರಪ್ಪ ಅವರನ್ನು ಲಿಂಗಾಯತ ನಾಯಕರು ಅಂತಾ ನಂಬಿದ್ವಿ. ಅವರು ಮೀಸಲಾತಿ ಕೊಡಬಹುದು ಅನ್ನೋ ಕಾರಣಕ್ಕೆ ದೊಡ್ಡ ಮಟ್ಟದಲ್ಲಿ ಪಾದಯಾತ್ರೆ ಮಾಡಿದ್ವಿ ಆದರೆ ಕೊಡಲಿಲ್ಲ ಎಂದು ಸ್ವಾಮೀಜಿ ಹೇಳಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ