Breaking News

ಸರ್ಕಾರದ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ

Spread the love

ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದ ಬಗ್ಗೆ ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆದಿದ್ದು, ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶಹಬ್ಬಾಸ್ ಗಿರಿ ನೀಡಿದ್ದಾರೆ.

ಪಿಎಸ್‌ಐ ತನಿಖೆ ಗಂಭೀರತೆ ಪಡೆದುಕೊಂಡಿದೆ.

ಈ ಹಿಂದೆ ಇಂತಹ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬರುತ್ತಿದ್ದರು. ಈ ಕೇಸ್ ನಲ್ಲಿ ಆ ರೀತಿ ಆಗಿಲ್ಲ. ಸರ್ಕಾರ ಬಿಗುವಾಗಿ ತನಿಖೆ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಮತ್ತೆ ದಾರಿ ತಪ್ಪುವುದು ಬೇಡ. ಈ ವ್ಯವಸ್ಥೆಯನ್ನು ಹಂತ ಹಂತವಾಗಿ ನಾವೇ ಡ್ಯಾಮೇಜ್ ಮಾಡಿದ್ದೇವೆ. ಇಂತಹ ವ್ಯವಸ್ಥೆ ಸಂಪೂರ್ಣವಾಗಿ ನಿಲ್ಲಿಸಲು ಕಠಿಣ ಕ್ರಮ ಆಗಬೇಕಿದೆ. ಈ ಚರ್ಚೆಯ ಮೂಲಕ ಯುವಕರಿಗೆ ಒಂದು ಸಂದೇಶ ಕೊಡಬೇಕಿದೆ. ಈ ಬಗ್ಗೆ ಎಲ್ಲಾ ಸದಸ್ಯರಿಗೂ ನಾನು ಮನವಿ ಮಾಡುತ್ತೇನೆ. ಇಲ್ಲಿಯವರೆಗೂ ಪಾರದರ್ಶಕ ತನಿಖೆ ನಡೆಸಿ ನಂಬಿಕೆ ಮೂಡಿಸಿದ್ದೀರಿ. ಅದರಂತೆ ತನಿಖೆಯಲ್ಲಿ ಇನ್ನೂ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ