Breaking News

ಯಡಿಯೂರಪ್ಪಗೆ ಕಂಡಲ್ಲಿ ಕಪ್ಪುಬಾವುಟ ತೋರಿಸಿ: ಕೂಡಲಸಂಗಮಶ್ರೀ ಸೂಚನೆ

Spread the love

ಶಿಗ್ಗಾವಿ (ಹಾವೇರಿ ಜಿಲ್ಲೆ): ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಮನಸ್ಸಿದೆ. ಆದರೆ ಮಾಜಿ ಮುಖ್ಯಮಂತ್ರಿ, ಶಾಸಕ ಬಿ.ಎಸ್.ಯಡಿಯೂರಪ್ಪ ಮೀಸಲಾತಿ ನೀಡದಂತೆ ಒತ್ತಡ ತರುತ್ತಿದ್ದಾರೆ’ ಎಂದು ಆರೋಪಿಸಿದ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ‘ರಾಜ್ಯದ ಪಂಚಮಸಾಲಿ ಸಮಾಜ ಯಡಿಯೂರಪ್ಪನವರಿಗೆ ಕಪ್ಪು ಬಾವುಟ ತೋರಿಸಬೇಕು’ ಎಂದು ಸೂಚನೆ ನೀಡಿದರು.

 

2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಮಂಗಳವಾರ ಶಿಗ್ಗಾವಿ ಪಟ್ಟಣದಲ್ಲಿ ಪಾದಯಾತ್ರೆ ನಡೆಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆ ಮುಂದೆ ನಡೆದ ಬೃಹತ್ ಧರಣಿ ನೇತೃತ್ವ ವಹಿಸಿ ಅವರು ಮಾತನಾಡಿ,’ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಾವು ನಡೆಸಿದ ಧರಣಿಗೆ ಬಂದು, ನಮ್ಮ ಬೇಡಿಕೆಯಂತೆ ಮೀಸಲಾತಿ ನೀಡುವುದಾಗಿ ಭರವಸೆ ನೀಡಿ ಹೋದ ಅವರೇ ಈಗ ವಿರೋಧಿಸುವುದು ಸರಿಯಲ್ಲ. ಮೀಸಲಾತಿಗೆ ಇನ್ನು ತೊಂದರೆ ನೀಡಿದರೆ ಶಿಕಾರಿಪುರದಲ್ಲಿನ ಅವರ ಮನೆ ಮುಂದೆ ಧರಣಿ ಹಮ್ಮಿಕೊಳ್ಳುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

‘ಬಂಗಾರದ ಗುಡಿ ಕಟ್ಟಿಸುತ್ತೇವೆ, ಕೋಟ್ಯಂತರ ಹಣ ಮಠಗಳಿಗೆ ಬಿಡುಗಡೆ ಮಾಡುತ್ತೇವೆ ಎಂಬ ಮಾತುಗಳನ್ನು ಬಿಟ್ಟು ಸಮಾಜದ ಮಕ್ಕಳ ಶಿಕ್ಷಣ, ಉದ್ಯೋಗಕ್ಕಾಗಿ ಮೀಸಲಾತಿ ನೀಡಬೇಕು. ಮೀಸಲಾತಿ ನೀಡಿದರೆ ಯಡಿಯೂರಪ್ಪ, ಬೊಮ್ಮಾಯಿ ಫೋಟೊಗಳನ್ನು ಮನೆ,ಮಠಗಳಲ್ಲಿ ಇಟ್ಟು, ಚನ್ನಮ್ಮನಷ್ಟೇ ಅವರನ್ನು ಸ್ಮರಿಸುತ್ತೇವೆ. ಇಲ್ಲವಾದಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಪಂಚಮಸಾಲಿಗಳನ್ನು ಸಂಘಟಿಸಿ ಬೆಂಗಳೂರಿಗೆ ತೆರಳಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ’ ಎಂದು ಗುಡುಗಿದರು.

‘ಹಿಂದೆ, ನಿಜಲಿಂಗಪ್ಪ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಮುಖ್ಯಮಂತ್ರಿ ಮಾಡಿದ ಶಿಗ್ಗಾವಿ, ಸವಣೂರಿನ ಕ್ಷೇತ್ರದ ಜನರು ವಿರೋಧ ಬಂದರೆ ತಕ್ಕ ಪಾಠ ಕಲಿಸಲಿದ್ದಾರೆ. ಬೊಮ್ಮಾಯಿ ಅವರು ಉಂಡ ನವಣಕ್ಕಿ ಅನ್ನದ ಋಣ ತೀರಿಸಲು ಮುಂದಾಗಬೇಕು. ಇತರರ ಒತ್ತಡಕ್ಕೆ ಮಣಿಯಬಾರದು’ ಎಂದು ಹೇಳಿದರು.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ