Breaking News

ಸಂಕಷ್ಟದಲ್ಲಿ ಮುರುಘಾ ಮಠದ ವಿದ್ಯಾಸಂಸ್ಥೆಯ 3 ಸಾವಿರ ಸಿಬ್ಬಂದಿ..!

Spread the love

ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

 

ಹೌದು, ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಇದೀಗ ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಇದರಿಂದ ಎಸ್ ಜೆ ಎಂ ವಿದ್ಯಾಸಂಸ್ಥೆಯ ಸಿಬ್ಬಂದಿಗೆ ಸಂಕಷ್ಟ ಎದುರಾಗಿದೆ. ಯಾಕೆಂದರೆ ವಿದ್ಯಾಸಂಸ್ಥೆಯ 3 ಸಾವಿರ ಸಿಬ್ಬಂದಿಗೆ ಸಂಬಳ ನೀಡಲು ಸಂಸ್ಥೆಯ ಅಧ್ಯಕ್ಷರಾಗಿರುವ ಮುರುಘಾ ಶ್ರೀ ಬಂದು ಸಹಿ ಮಾಡಬೇಕು, ಆದರೆ ಮುರುಘ ಶ್ರೀ ಸದ್ಯ ಜಿಲ್ಲಾ ಕಾರಾಗೃಹದಲ್ಲಿದ್ದಾರೆ, ಈ ಹಿನ್ನೆಲೆ ಕಾರಾಗೃಹದಲ್ಲೇ ಸಹಿ ಮಾಡಲು ಅವಕಾಶ ಕೇಳಿ ಅರ್ಜಿ ಸಲ್ಲಿಸಲಾಗಿತ್ತು, ಆದರೆ ಮುರುಘಾಶ್ರೀ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ, ಚಿತ್ರದುರ್ಗ 2 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶ ಹೊರಡಿಸಿದೆ, ಆದ್ದರಿಂದ ಎಸ್ ಜೆ ಎಂ ವಿದ್ಯಾಸಂಸ್ಥೆಯ ಸಿಬ್ಬಂದಿಗೆ ಸಂಕಷ್ಟ ಎದುರಾಗಿದೆ.

ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಪೊಲೀಸರು ಡಾ.ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿದ್ದು, ಜಾಮೀನಿಗಾಗಿ ಮಠದ ಪರ ವಕೀಲರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ನಿನ್ನೆ ಕೋರ್ಟ್ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ