Breaking News

2.69 ಕೋಟಿ ರೂ. ಲಪಟಾಯಿಸಿದ್ದ ಅಸಿಸ್ಟೆಂಟ್​ ಬ್ಯಾಂಕ್​ ಮ್ಯಾನೇಜರ್​; ತಲೆಮರೆಸಿಕೊಂಡಿದ್ದವ ಕೊನೆಗೂ ಸಿಕ್ಕಿಬಿದ್ದ..

Spread the love

ತ್ತರಕನ್ನಡ: ಬ್ಯಾಂಕ್​ನಲ್ಲಿ ಕೋಟ್ಯಂತರ ರೂಪಾಯಿಯನ್ನು ಲಪಟಾಯಿಸಿ ತಲೆಮರೆಸಿಕೊಂಡಿದ್ದ ಅಸಿಸ್ಟೆಂಟ್ ಮ್ಯಾನೇಜರ್ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಪೊಲೀಸರು ಹುಬ್ಬಳ್ಳಿಯಲ್ಲಿ ಬಂಧಿಸಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ಈ ಪ್ರಕರಣ ನಡೆದಿತ್ತು.

ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ ಕುಮಾರ್ ಬೋನಾಲ್ ಎಂಬಾತ ಬ್ಯಾಂಕ್​ನಿಂದಲೇ 2.69 ಕೋಟಿ ರೂ. ಲಪಟಾಯಿಸಿದ್ದ.

ಆಂಧ್ರಪ್ರದೇಶ ಮೂಲದ ಈತ ಇನ್ನೊಬ್ಬ ಉದ್ಯೋಗಿಯ ಲಾಗಿನ್​ ದುರ್ಬಳಕೆ ಮಾಡಿಕೊಂಡು 2.69 ಕೋಟಿ ರೂ. ಲಪಟಾಯಿಸಿದ್ದ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಹುಬ್ಬಳ್ಳಿಯಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಕುಮಾರ್ ಬೋನಾಲ್, ತಾನು ಲಪಟಾಯಿಸಿದ್ದ ಹಣವನ್ನು ಆನ್​ಲೈನ್ ಗೇಮ್​​ನಲ್ಲಿ ಕಳೆದುಕೊಂಡಿರುವುದಾಗಿ ಪ್ರಾಥಮಿಕ ತನಿಖೆ ವೇಳೆ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ