Breaking News

ಮನೆಯ ಸಿಲಿಂಡರ್ ಸ್ಫೋಟ

Spread the love

ಹುಕ್ಕೇರಿ ತಾಲ್ಲೂಕಿನ ಕರಗುಪ್ಪಿ-ಯಲ್ಲಾಪುರ ಗ್ರಾಮದ ಮನೆಯೊಂದರಲ್ಲಿ ಬೆಳಿಗ್ಗೆ ಸಿಲಿಂಡರ್ ಸ್ಫೋಟವಾಗಿ ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ನಡೆದಿದೆ.

ಕರಗುಪ್ಪಿ-ಯಲ್ಲಾಪುರ ಗ್ರಾಮದ ಗೌಡ್ರ ಓಣಿಯ ಅಲಗೌಡ ಅಪ್ಪರಾಯಗೌಡ ಪಾಟೀಲ ಎಂಬುವವರ ಮನೆಯಲ್ಲಿ ಅಡುಗೆ ಮಾಡಲು ಓಲೆಯ ಮೇಲೆ ಇಟ್ಟು ಹೊರಗಡೆ ಹೋದ ಸಂದರ್ಭದಲ್ಲಿ ಸಿಲಿಂಡರ್ ಗ್ಯಾಸ್ ಲೀಕ್ ಆಗಿ ಈ ದುರಂತ ಸಂಭವಿಸಿದೆ.

ಶೇ.೫೦ರಷ್ಟು ಮನೆ ಸಂಪೂರ್ಣವಾಗಿ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ಆಗಮಿಸಿ ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ