Breaking News
Home / ಸಿನೆಮಾ / ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ

ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ

Spread the love

ಬೆಂಗಳೂರು: ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ಕಳೆದ ಮೂರು ದಿನಗಳಿಂದ ಒಂದಾದ ಮೇಲೊಂದರಂತೆ ಕೆಟ್ಟ ಸುದ್ದಿಗಳೇ ಬರುತ್ತಿರುವುದು ನೋವಿನ ವಿಚಾರ. ಅವರು ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿ 51 ದಿನಗಳು ಕಳೆದಿದ್ದು, ನಮ್ಮೆಲ್ಲರಿಗೂ ಅವರ ಆರೋಗ್ಯದ ಬಗ್ಗೆ ಚಿಂತೆ ಇತ್ತು. ಲಕ್ಷಾಂತರ ಅಭಿಮಾನಿಗಳು ಅವರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ ಆ ಯಮ ನಿಷ್ಕರುಣಿ. ಹೀಗಾಗಿ ನಮ್ಮ ಪ್ರಾರ್ಥನೆ ಫಲಿಸಲಿಲ್ಲ.

ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಬಾಲಸುಬ್ರಹ್ಮಣ್ಯಂ ತಮ್ಮ ಕಂಠ ಸಿರಿಯಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರ ಹಾಡುಗಳನ್ನು ಕೇಳಿ ನಾವು ಬೆಳೆದಿದ್ದೇವೆ. ಅವರ ಸಾಧನೆಗೆ ಪದ್ಮ ಶ್ರೀ ಹಾಗೂ ಪದ್ಮ ಭೂಷಣ ಪ್ರಶಸ್ತಿ ಸೇರಿದಂತೆ 6 ಬಾರಿ ರಾಷ್ಟ್ರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಸಂದಿವೆ ಎಂದು ಶಿವಕುಮಾರ್ ಅವರು ಸ್ಮರಿಸಿಕೊಂಡಿದ್ದಾರೆ.

ತಮ್ಮ ಸರಳತೆ, ವಿನಯತೆಯಿಂದಲೂ ಅಭಿಮಾನಿಗಳ ಮನಗೆದ್ದಿದ್ದ ಎಸ್‍ಪಿಬಿ ಅವರ ನಿಧನದಿಂದ ಸಿನಿಮಾ ಸಂಗೀತ ಕ್ಷೇತ್ರದಲ್ಲಿ ಒಂದು ಅದ್ಭುತ ಯುಗವೇ ಅಂತ್ಯವಾದಂತಾಗಿದೆ. ಅವರ ಮುಗಿಲೆತ್ತರದ ಸಾಧನೆ ಹಾಗೂ ಹಾಡುಗಳಿಂದ ಅವರು ನಮ್ಮೊಂದಿಗೆ ಸದಾ ಜೀವಂತವಾಗಿ ಇರುತ್ತಾರೆ.


Spread the love

About Laxminews 24x7

Check Also

ಪುನೀತ್​ ರಾಜ್​ಕುಮಾರ್ ಅವರು​ ಇಹಲೋಕ ತ್ಯಜಿಸಿ ಇಂದಿಗೆ 2 ವರ್ಷ

Spread the love ಕನ್ನಡದ ಹೆಸರಾಂತ ನಟ ಪುನೀತ್​ ರಾಜ್​ಕುಮಾರ್ ಅವರು​ ಇಹಲೋಕ ತ್ಯಜಿಸಿ ಇಂದಿಗೆ 2 ವರ್ಷವಾಗುತ್ತಿದೆ. ಪುಣ್ಯಸ್ಮರಣೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ