Breaking News

ಶಿಕ್ಷಕರ ಅಕ್ರಮ ನೇಮಕಾತಿ: ಮತ್ತೊಬ್ಬ ಶಿಕ್ಷಕನ ಬಂಧನ  

Spread the love

ವಿಜಯಪುರ: ಶಿಕ್ಷಕರ ಅಕ್ರಮ ನೇಮಕ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಸಿಒಡಿ ಪೊಲೀಸರು ಅಕ್ರಮ ನೇಮಕಾತಿಯಲ್ಲಿ ಕೈಚಳಕ ತೋರಿದ ವಿಜಯಪುರ ಜಿಲ್ಲೆಯ ಶಿಕ್ಷಕರನ್ನು ಒಬ್ಬೊಬ್ಬರಾಗಿ ಬಲೆಗೆ ಕೆಡವುತ್ತಿದ್ದಾರೆ.

ಇದೀಗ ಮತ್ತೂಬ್ಬ ಶಿಕ್ಷಕ ಅಶೋಕ ಚವ್ಹಾಣ ಎಂಬಾತನನ್ನು ಬಂಧಿ ಸಿ ವಿಚಾರಣೆ ನಡೆಸಿದ್ದಾರೆ.

ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಜಯಪುರ ಜಿಲ್ಲೆಯ ನಂಟು ಗಾಢವಾಗಿರುವುದು ಶಿಕ್ಷಕರ ಸರಣಿ ಬಂಧನ ಇಂಬು ನೀಡುತ್ತಿದೆ.

ವಿಜಯಪುರ ಜಿಲ್ಲೆ ಬಸವನಬಾಗೇಬಾಡಿ ತಾಲೂಕಿನ ಭೈರವಾಡಗಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದ ಅಶೋಕ ಚವ್ಹಾಣ ಅಕ್ರಮ ನೇಮಕ ಆಗಿರುವ ಸೂಕ್ತ ದಾಖಲೆ, ಮಾಹಿತಿ ಸಂಗ್ರಹಿಸಿರುವ ಸಿಒಡಿ ತನಿಖಾ ತಂಡ, ಅಕ್ರಮ ನೇಮಕಾತಿ ಹೊಂದಿದ್ದನ್ನು ಖಚಿತಪಡಿಸಿಕೊಂಡಿದೆ.

ವಿಜಯಪುರ ಜಿಲ್ಲೆಗೆ ವರ್ಗವಾಗಿ ಬರುವ ಮುನ್ನ ಶಿಕ್ಷಕ ಅಶೋಕ ಚವ್ಹಾಣ ಚಿತ್ರದುರ್ಗ ಜಿಲ್ಲೆ ಜಗಳೂರಿನಲ್ಲಿ ಮೊದಲು ಸೇವೆ ಸಲ್ಲಿಸಿದ್ದ. ಶಿಕ್ಷಕರ ಅಕ್ರಮ ನೇಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಮಹೇಶ ಸೂಸಲಾದಿ, ಕಪನಿಂಬರಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಸಿದ್ರಾಮಪ್ಪ ಬಿರಾದಾರನನ್ನು ಬಂಧಿಸಲಾಗಿದ್ದು, ಬಂಧಿತ ಶಿಕ್ಷಕರ ಸಂಖ್ಯೆ ಮೂರಕ್ಕೇರಿದೆ.


Spread the love

About Laxminews 24x7

Check Also

ಸಾಲದ ಹಣಕ್ಕಾಗಿ ವ್ಯಕ್ತಿಯನ್ನ ಒತ್ತೆ ಇಟ್ಟುಕೊಂಡ ಸಾಲಗಾರ

Spread the loveವಿಜಯಪುರ, ಜೂನ್​​ 27: ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಸಾಲದ (Debt) ಹಣ (money) ವಸೂಲಿ ಮಾಡುವ ನೆಪದಲ್ಲಿ ವ್ಯಕ್ತಿಯನ್ನು ಒತ್ತೆಯಾಗಿಟ್ಟುಕೊಂಡಿರೋ ಗಂಭೀರ ಆರೋಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ