Breaking News

ಲಂಚದ ಹಣ ವಾಪಸ್​ ನೀಡುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಅಧಿಕಾರಿಗಳು

Spread the love

ಬೆಂಗಳೂರು: ಸಾಮಾನ್ಯವಾಗಿ ಲಂಚ ಪಡೆಯುವಾಗ ಭ್ರಷ್ಟ ಅಧಿಕಾರಿಗಳು ಸಿಕ್ಕಿ ಬೀಳುತ್ತಾರೆ. ಆದರೆ ಈ ಪ್ರಕರಣದಲ್ಲಿ ಲಂಚ ಪಡೆಯುವಾಗ ಸಿಕ್ಕಿಬೀಳದೆ, ಲಂಚದ ಹಣವನ್ನು ವಾಪಸ್​ ಕೊಡುವಾಗ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ–2 ಹುದ್ದೆಯಲ್ಲಿದ್ದ ಕೆಎಎಸ್‌ ಅಧಿಕಾರಿ ಎ.ಬಿ. ವಿಜಯಕುಮಾರ್‌ ಮತ್ತು ಅವರ ಕಚೇರಿಯ ಭೂಮಾಪಕ ರಘುನಾಥ್‌ ಬಂಧಿತ ಆರೋಪಿಗಳಾಗಿದ್ದಾರೆ. ವ್ಯಕ್ತಿಯೊಬ್ಬರ ಜಮೀನು ಸ್ವಾಧೀನಪಡಿಸಿಕೊಂಡಿಲ್ಲ‌ ಎಂದು ನಿರಾಕ್ಷೇಪಣಾ ಪತ್ರ (ಎನ್ಓಸಿ) ಪತ್ರ ನೀಡಲು 2.5 ಲಂಚ ಪಡೆದಿದ್ದರು ಎನ್ನಲಾಗ್ತಿದೆ.

ಈ ಸಂಬಂಧ ಹಿರಿಯ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ದೂರಿನ ಹಿನ್ನೆಲೆಯಲ್ಲಿ ತನಿಖೆ ಆರಂಭವಾಗುತ್ತಿದ್ದಂತೆ ಭಯಗೊಂಡ ಈ ಇಬ್ಬರೂ ಆರೋಪಿಗಳು ದೂರುದಾರರನ್ನು ಸಂಪರ್ಕಿಸಿ ಅದನ್ನು ಹಿಂಪಡೆದರೆ 2.5 ಲಕ್ಷದ ಹಣದ ಜೊತೆಗೆ ಹೆಚ್ಚುವರಿಯಾಗಿ 50 ಸಾವಿರ ಹಣ ನೀಡುವುದಾಗಿ ಹೇಳಿದ್ದರು. ಈ ಸಂಬಂಧ ಲಂಚದ ಹಣ ನೀಡುವಾಗಲೇ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ