Breaking News

ಕಾಂಗ್ರೆಸ್ ಮುಖಂಡರ ಬಂಧನ: ಬಿಜೆಪಿಯಿಂದ ಅಧಿಕಾರ ದುರ್ಬಳಕೆ, ದ್ವೇಷದ ರಾಜಕಾರಣ- ಡಿಕೆಶಿ

Spread the love

ಬೆಂಗಳೂರು: ಪೇ ಸಿಎಂ ಪೋಸ್ಟರ್ ಅಭಿಯಾನದ ಹಿನ್ನೆಲೆಯಲ್ಲಿ ನಗರದ ಪೊಲೀಸರು ಐವರು ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ಪಡೆದಿದ್ದು, ಹೈಗ್ರೌಂಡ್ಸ್ ಠಾಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಭೇಟಿ ನೀಡಿ ವಿಚಾರಿಸಿದ್ದಾರೆ.

ಡಿಕೆಶಿ ಕಿಡಿ: ಪಕ್ಷದ ಮುಖಂಡರ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆಶಿ, ಪ್ರಜಾಪ್ರಭುತ್ವದ ಅಡಿ ನಾವು ಕೆಲಸ ಮಾಡುತ್ತಿದ್ದೇವೆ. 40% ಕಮಿಷನ್ ಸರ್ಕಾರ ಅಂತ ನಾವೆಲ್ಲ ಕ್ಯಾಂಪೇನ್ ಮಾಡಿದ್ದೇವೆ. ಬಿಜೆಪಿ ವಿರುದ್ಧ ಮಾಧ್ಯಮದ ಸೋರ್ಸ್ ರೇಟ್ ಕಾರ್ಡ್ ಬಳಸಿ ಕ್ಯಾಂಪೇನ್​ ಮಾಡಲಾಗಿದೆ. ಇದು ಸತ್ಯ, 1.9 ಲಕ್ಷ ಜನ ಇದನ್ನು ಡೌನ್​ಲೋಡ್ ಮಾಡಿಕೊಂಡಿದ್ದಾರೆ. 8 ಸಾವಿರ ದೂರು ದಾಖಲಾಗಿದೆ. ನಾಳೆ ಎಲ್ಲ ಎಂಎಲ್​ಸಿ, ಎಂಎಲ್ಎಗಳು ನಾವೇ ಪೇಸಿಎಂ ಪೋಸ್ಟರ್ ಅಂಟಿಸುತ್ತೇವೆ ಎಂದಿದ್ದಾರೆ. ಸರ್ಕಾರಿ ಕಟ್ಟಡಗಳ ಮೇಲೆಯೂ ಪೋಸ್ಟರ್ ಅಂಟಿಸುತ್ತೇವೆ. ಬಿಜೆಪಿಯವರು ಅಧಿಕಾರ ದುರ್ಬಳಕೆ ಹಾಗೂ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದರು.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ