ಹಾವೇರಿ, ಸೆಪ್ಟೆಂಬರ್ 21: ರಾಣೇಬೆನ್ನೂರು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡುವ ವೇಳೆ 300ರಿಂದ 500 ಜನರ ಅನ್ಯಕೋಮಿನ ಗುಂಪು ಹಿಂದೂ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.
ಮಂಗಳವಾರ ತಡರಾತ್ರಿ ಕಾಕಿ ಗಲ್ಲಿಯ ಗಣಪತಿ ವಿಸರ್ಜನಾ ಮೆರವಣಿಗೆ ನಡೆದಿದ್ದು, ದರ್ಗಾ ಸರ್ಕಲ್‌ಗೆ ಬಂದಾಗ ಅನ್ಯಕೋಮಿನ ಗುಂಪು ದಾಳಿ ಮಾಡಿದ್ದಾರೆ.
ಘಟನೆಯಲ್ಲಿ ಹಲವು ಯುವಕರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಘಟನೆ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ದರ್ಗಾ ಸರ್ಕಲ್‌ನಲ್ಲಿ ಸೇರಿದ್ದ ನೂರಾರು ಜನರನ್ನು ಚದುರಿಸಿದ್ದಾರೆ. ಸ್ಥಳಕ್ಕೆ ಎಸ್ಪಿ ಹನುಮಂತರಾಯ, ಹೆಚ್ಚುವರಿ ಎಸ್ಪಿ ವಿಜಯಕುಮಾರ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನೂ ಚಾಕು ಇರಿತವಾಗಿದೆ ಎಂಬ ಗಾಳಿ ಸುದ್ದಿ ಕೂಡ ಹಬ್ಬಿತ್ತು. ಆದರೆ ಪೊಲೀಸ್ ಅಧಿಕಾರಿಗಳು ವದಂತಿ ಎಂದು ಖಚಿತಪಡಿಸಿದ್ದಾರೆ. ಆದರೆ ಕಲ್ಲು ತೂರಾಟ ಮಾಡಿದ ಆರೋಪದ ಮೇಲೆ ಸುಮಾರು 300ಕ್ಕೂ ಹೆಚ್ಚು ಮಂದಿ ಮೇಲೆ ಎಫ್‌ಐಆರ್ ದಾಖಲಾಗಿದೆ.