Breaking News

ವಿಜಯಪುರ: ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಹಣ ಪಡೆಯಲು ಬಂದಿದ್ದ ವ್ಯಕ್ತಿ ಪೊಲೀಸ್​​ ವಶಕ್ಕೆ

Spread the love

ವಿಜಯಪುರ: ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಹಣ ಪಡೆಯಲು ಬಂದಿದ್ದ ವ್ಯಕ್ತಿಯನ್ನು ಯುವಕರು ಹಿಡಿದು ಪೊಲೀಸರಿಗೊಪ್ಪಿಸಿರುವ ಘಟನೆ ಜಿಲ್ಲೆಯ ‌ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ನಡೆದಿದೆ.

ಹೋಂ ಗಾರ್ಡ್ ಶಾಂತೇಶ್ ಕೊರ್ತಿ ಎಂಬಾತ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 8 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಎಂದು ಆರೋಪಿಸಲಾಗಿದೆ. ಹಣ ನೀಡುವುದಾಗಿ ಕರೆಸಿದ ಯುವಕರು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶ್ರೀಕಾಂತ್​ ಎಂಬುವವರ ಬಳಿ ಹಣ ಪಡೆಯಲು ಶಾಂತೇಶ್ ಕೊರ್ತಿ ಬಂದಿದ್ದ. ಮುಂಗಡವಾಗಿ 2 ಲಕ್ಷ ಹಣ ಪಡೆಯುವಾಗ ಆರೋಪಿಯನ್ನು ಯುವಕರು ಗಾಂಧಿಚೌಕ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆೆ. ಕೃಷ್ಣ ಎನ್ನುವವರ ಸೂಚನೆ ಮೇರೆಗೆ ಹಣ ಪಡೆಯಲು ಬಂದಿದ್ದಾಗಿ ಆರೋಪಿ ಶಾಂತೇಶ್ ಪೊಲೀಸರಿಗೆ ತಿಳಿಸಿದ್ದಾನೆ.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ