Breaking News
Home / ರಾಜಕೀಯ / ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಅಕ್ಕಿ ದರ ಮತ್ತಷ್ಟು ಹೆಚ್ಚಳ ಸಾಧ್ಯತೆ

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಅಕ್ಕಿ ದರ ಮತ್ತಷ್ಟು ಹೆಚ್ಚಳ ಸಾಧ್ಯತೆ

Spread the love

ವದೆಹಲಿ: ಮುಂದಿನ ದಿನಗಳಲ್ಲಿ ಅಕ್ಕಿ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಖಾರಿಫ್ ಋತುವಿನಲ್ಲಿ ಕಡಿಮೆ ಇಳುವರಿ, ರಫ್ತು ಇತರೆ ಕಾರಣದಿಂದ ಅಕ್ಕಿ ಬೆಲೆ ಏರಿಕೆ ಮುಂದುವರೆಯಬಹುದು ಎಂದು ಹೇಳಲಾಗಿದೆ.

ರಫ್ತು ನೀತಿಯಲ್ಲಿ ಬದಲಾವಣೆ

ಆಹಾರ ಸಚಿವಾಲಯ ನೀಡಿದ ಮಾಹಿತಿಯಲ್ಲಿ, ಭಾರತದ ಅಕ್ಕಿ ರಫ್ತು ನೀತಿಯಲ್ಲಿ ಇತ್ತೀಚಿನ ತಿದ್ದುಪಡಿಗಳ ಹಿಂದಿನ ವಿವರವಾದ ಕಾರಣಗಳನ್ನು ವಿವರಿಸಲಾಗಿದೆ. ಭಾರತದ ಅಕ್ಕಿ ರಫ್ತು ನಿಯಮಗಳಲ್ಲಿ ಇತ್ತೀಚಿನ ಬದಲಾವಣೆಗಳು ರಫ್ತಿಗೆ ಲಭ್ಯತೆಯನ್ನು ಕಡಿಮೆ ಮಾಡದೆ “ದೇಶೀಯ ಬೆಲೆಗಳನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡಿದೆ” ಎಂದು ಸಚಿವಾಲಯ ಹೇಳಿದೆ.

ಒಡೆದ(ನುಚ್ಚು) ಅಕ್ಕಿ ರಫ್ತು ನಿಷೇಧ

ಸೆಪ್ಟೆಂಬರ್ ಆರಂಭದಲ್ಲಿ, ಒಡೆದ ಅಕ್ಕಿಯ ರಫ್ತನ್ನು ಸರ್ಕಾರ ನಿಷೇಧಿಸಿದೆ. ಬಾಸ್ಮತಿ ಅಲ್ಲದ ಅಕ್ಕಿಗೆ 20 ಪ್ರತಿಶತ ರಫ್ತು ಸುಂಕವನ್ನು ವಿಧಿಸಿದೆ. ಆಹಾರ ಸಚಿವಾಲಯವು ಫ್ಯಾಕ್ಟ್ ಶೀಟ್‌ನಲ್ಲಿ, ದೇಶೀಯ ಅಕ್ಕಿ ಬೆಲೆಗಳು ಏರುಮುಖದ ಪ್ರವೃತ್ತಿ ತೋರಿಸುತ್ತಿವೆ. ಸುಮಾರು 6 ಮಿಲಿಯನ್ ಟನ್ ಭತ್ತದ ಉತ್ಪಾದನೆ ಮತ್ತು ಬಾಸ್ಮತಿ ಅಲ್ಲದ ಅಕ್ಕಿಯ ರಫ್ತಿನಲ್ಲಿ ಶೇಕಡಾ 11 ರಷ್ಟು ಬೆಳವಣಿಗೆಯ ಮುನ್ಸೂಚನೆಯಿಂದಾಗಿ ಏರಿಕೆಯಾಗಬಹುದು ಎನ್ನಲಾಗಿದೆ.


Spread the love

About Laxminews 24x7

Check Also

ಹೋಟೆಲ್ ರೂಮಿನಲ್ಲಿ ಇಬ್ಬರು ಪುರುಷರೊಂದಿಗೆ ವಿವಾಹಿತ ಮಹಿಳೆಯ ಚೆಲ್ಲಾಟ

Spread the love ಇತ್ತೀಚಿನ ದಿನಗಳಲ್ಲಿ ವಿವಾಹಿತ ಪುರುಷರು ಮತ್ತು ಮಹಿಳೆಯರ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಇಂತಹದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ