Breaking News
Home / ರಾಜ್ಯ / ಡ್ರಗ್ಸ್ ಪ್ರಕರಣ – ಡ್ಯಾನ್ಸರ್ ಕಿಶೋರ್‌ಗೆ ಅ.9ರವರೆಗೆ ನ್ಯಾಯಾಂಗ ಬಂಧನ

ಡ್ರಗ್ಸ್ ಪ್ರಕರಣ – ಡ್ಯಾನ್ಸರ್ ಕಿಶೋರ್‌ಗೆ ಅ.9ರವರೆಗೆ ನ್ಯಾಯಾಂಗ ಬಂಧನ

Spread the love

ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಬಂಧಿಸಿದಂತೆ ಬಂಧಿತರಾಗಿರುವ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಹಾಗೂ ಅಕೀಲ್ ನೌಶೀನ್‍ನನ್ನು ಅಕ್ಟೋಬರ್ 9 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಧಿತರನ್ನು ಶುಕ್ರವಾರ ನಾರ್ಕೊಟಿಕ್ ಕ್ರೈಂ ಪೊಲೀಸರು ಮಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಿದ ಪೊಲೀಸರು, ಅ.9 ರವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.ಕಳೆದ ಆರು ದಿನಗಳಿಂದ ಆರೋಪಿಗಳು ನಾರ್ಕೊಟಿಕ್ ಪೊಲೀಸರ ವಶದಲ್ಲಿದ್ದರು. ಸೆಪ್ಟೆಂಬರ್ 19ರಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದರು.

ಬಂಧಿತರಿಂದ ಎಂಡಿಎಂ ಪೌಡರ್, ಬೈಕ್, 2 ಮೊಬೈಲ್ ಫೋನ್ ಸೇರಿದಂತೆ 1 ಲಕ್ಷ ಮೌಲ್ಯದ ವಸ್ತು ವಶಕ್ಕೆ ಪಡೆದುಕೊಳ್ಳಲಾಗಿತ್ತು. ಆರೋಪಿಗಳು ಮುಂಬೈಯಿಂದ ವಸ್ತುಗಳನ್ನು ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು. ಇಬ್ಬರ ಮೇಲೆ ಸೇವನೆ ಮತ್ತು ಮಾರಾಟ ಎರಡೂ ಪ್ರಕರಣ ದಾಖಲಾಗಿದೆ.

ಆರೋಪಿ ಅಕೀಲ್ ನೌಶೀಲ್ ಈ ಹಿಂದೆ ವಿದೇಶದಲ್ಲಿ ಸೇಫ್ಟಿ ಆಫೀಸರ್ ಆಗಿದ್ದ. ಒಂದು ವರ್ಷದ ಊರಿಗೆ ಬಂದಿದ್ದ ಈತ, ಕಿಶೋರ್ ಅಮನ್ ಜೊತೆ ಡ್ಯಾನ್ಸರ್, ಕೋರಿಯೋಗ್ರಾಫರ್ ಆಗಿ ಕೆಲಸ ಮಾಡಿಕೊಂಡಿದ್ದ. ಅಲ್ಲದೆ ಅಕೀಲ್ ನೌಶೀಲ್ ಜೊತೆ ಸೇರಿ ಮಾದಕ ವಸ್ತು ಖರೀದಿಸಿ ಮಾರಾಟ ಮಾಡುತ್ತಿದ್ದ. ಬೆಂಗಳೂರು, ಮುಂಬೈಯಿಂದ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದರು. ಈ ಪ್ರಕರಣದಲ್ಲಿ ಇನ್ನೂ ಕೆಲ ಆರೋಪಿಗಳಿದ್ದಾರೆ. ಇವರ ಚೈನ್ ಲಿಂಕ್ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತಿದ್ದೇವೆ ಎಂದು ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದರು.

ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿರುವ ಡ್ಯಾನ್ಸರ್ ಕಿಶೋರ್ ಅಮನ್ ಗೆಳತಿಯನ್ನು ಕೂಡ ಮಂಗಳೂರು ಪೊಲೀಸರು ಬಂಧಿಸಿದ್ದರು. ಕಿಶೋರ್ ಗೆಳತಿ ಮಂಗಳೂರಿನ ಸ್ಪಾದಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಮಣಿಪುರ ಮೂಲದ ಆಸ್ಕಾ ಬಂಧಿತ ಯುವತಿ. ಕಿಶೋರ್ ಶೆಟ್ಟಿ ಜೊತೆ ಡ್ರಗ್ಸ್ ಪಾರ್ಟಿಯಲ್ಲಿ ಆಸ್ಕಾ ಭಾಗಿಯಾಗುತ್ತಿದ್ದಳು. ಲಾಕ್‍ಡೌನ್ ಸಂದರ್ಭದಲ್ಲಿಯೂ ನಡೆಯುತ್ತಿದ್ದ ಪಾರ್ಟಿಗಳಿಗೆ ಆಸ್ಕಾ ತನ್ನ ಗೆಳತಿಯರ ಜೊತೆ ಆಗಮಿಸುತ್ತಿದ್ದಳು ಎನ್ನಲಾಗಿತ್ತು.


Spread the love

About Laxminews 24x7

Check Also

ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ :ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ

Spread the loveಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಲ್ಬುರ್ಗಿ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಮಲಿಕಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ