ಸಹೋದರ ರಮೇಶ್ ಜಾರಕಿಹೊಳಿಗೆ ಸರ್ಕಾರ ಉರಳಿಸುವ ಶಕ್ತಿ ಇz.ೆ ಅವರು ಇನ್ನೊಮ್ಮೆ ಸರ್ಕಾರ ಉರಳಿಸುವ ಪ್ರಯತ್ನ ಮಾಡಲಿ ಎಂದು ನಾವೆಲ್ಲ ಪ್ರಾರ್ಥಿಸೋಣ ಎಂದು ಹೇಳುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಸಹೋದರ ರಮೇಶ ಜಾರಕಿಹೊಳಿ ಕಾಲೆಳೆದಿದ್ದಾರೆ.
ಗೋಕಾಕ್ ನಗರದಲ್ಲಿ ಇಂದು ಶನಿವಾರ ನಡೆದ ಉಪ್ಪಾರ ಸಮಾಜದ ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಕಾಲೆಳೆದಿದ್ದಾರೆ. ಜಾರಕಿಹೊಳಿ ಸಹೋದರಿಗೆ ಸರ್ಕಾರ ಉರಳಿಸುವ ಶಕ್ತಿ ಇದೆ ಎಂದು ಹೇಳ್ತಾರೆ.
https://fb.watch/fKHfIYOp_x/
ರಾಜ್ಯ ರಾಜಕಾರಣದಲ್ಲಿ ನಾಲ್ವರು ಸಹೋದರರಿದ್ದೇವೆ. ನಾಲ್ವರು ಒಂದೇ ಎಂದು ಭಾವಿಸಬಾರದು. ನಾಲ್ವರು ಸಹೋದರರ ಕೆಲಸವೂ ಬೇರೆ ಬೇರೆ ಇದೆ, ಯಾರೂ ಕನ್ಫೂಸ್ ಮಾಡಿಕೊಳ್ಳಬಾರದು ಎಂದರು. ನಮ್ಮಲ್ಲಿ ಸರ್ಕಾರ ಉರಳಿಸುವ ಶಕ್ತಿ ರಮೇಶ್ ಜಾರಕಿಹೊಳಿ ಮಾತ್ರ ಇದೆ.
ಉಳಿದ ನಾಲ್ವರು ಸಹೋದರರು ಸರ್ಕಾರ ಉರಳಿಸುವುದರಲ್ಲಿ ಭಾಗವಾಗುವುದಿಲ್ಲ.ರಮೇಶ್ ಜಾರಕಿಹೊಳಿಗೆ ಮಾತ್ರ ಸರ್ಕಾರ ಉರಳಿಸುವ ಶಕ್ತಿ ಇದೆ. ಅವರು ಇನ್ನೊಮ್ಮೆ ಸರ್ಕಾರ ಉರಳಿಸುವ ಪ್ರಯತ್ನ ಮಾಡಲೆಂದು ದೇವರಲ್ಲಿ ಪ್ರಾರ್ಥಿಸೋಣ ಎನ್ನುವ ಮೂಲಕ ಸಹೋದರ ರಮೇಶ್ ಜಾರಕಿಹೊಳಿ ಕಾಲೆಳೆದಿದ್ದಾರೆ.
https://fb.watch/fKHfIYOp_x/