Breaking News

ನವರಾತ್ರಿಗೆ ಕರೆಂಟ್ ಶಾಕ್; ಕೇಂದ್ರದ ಹಾದಿಯಲ್ಲೇ ರಾಜ್ಯ ಸರ್ಕಾರ: H.D.K.

Spread the love

ಬೆಂಗಳೂರು: ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಸರ್ಕಾರ ಇಂಧನ ದರ ಏರಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಶನಿವಾರ ಆರೋಪಿಸಿದ್ದಾರೆ.

ಈ ಕುರಿತು ‘ನವರಾತ್ರಿಗೆ ಕರೆಂಟ್ ಶಾಕ್’ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ, ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಹೇಳಿದ್ದಾರೆ.

 

 

 

ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್ ದರ ಏರಿಕೆ ಆಗಿದೆ. ಏನೀ ಹುನ್ನಾರ? ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರ್ಕಾರ, ಕರೆಂಟ್‌ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ.‌ ಪ್ರತಿ ಯೂನಿಟ್‌ಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ ಮತ್ತು ಖಂಡನೀಯ ಎಂದು ಪ್ರತಿಕ್ರಿಯಿಸಿದ್ದಾರೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ