ಬೆಂಗಳೂರು: ಯಡಿಯೂರಪ್ಪ(Yediyurappa) ಮೇಲಿನ ಭ್ರಷ್ಟಾಚಾರ(Corruption) ಆರೋಪದಲ್ಲಿ 0.1% ಸತ್ಯವೂ ಇಲ್ಲ. ನಾವು ಹೆದರಿ ಓಡಿ ಹೋಗುವುದಿಲ್ಲ. 30 ಕೇಸ್ ಈಗಾಗಲೇ ಎದುರಿಸಿದ್ದು, ಇದು 31 ನೇ ಕೇಸ್. ಯಾವನಿಗೂ ಹೆದರಿ ಓಡಿ ಹೋಗುವ ಪ್ರಶ್ನೆ ಉದ್ಭವ ಆಗುವುದಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ(Vijayendra yediyurappa) ಹೇಳಿದ್ದಾರೆ.
ಬಿಜೆಪಿ(BJP) ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾಯಾಲಯದ ಮೇಲೆ ನಮಗೆ ವಿಶ್ವಾಸ ಇದೆ. ಯಡಿಯೂರಪ್ಪ ಮತ್ತು ನನ್ನನ್ನು ರಾಜಕೀಯವಾಗಿ ಮುಗಿಸಲು ಕುತಂತ್ರ ಮಾಡಲಾಗಿದೆ. ಇದಕ್ಕೆ ತಕ್ಕ ಉತ್ತರವನ್ನು ಎಲ್ಲಿ ಕೊಡಬೇಕು, ಯಾರಿಗೆ ಕೊಡಬೇಕು ಎನ್ನುವುದು ಗೊತ್ತಿದೆ ತಿರುಗೇಟು ನೀಡಿದರು.
ನಮ್ಮ ವಿರುದ್ಧ ರಾಜಕೀಯ ವಿರೋಧಿಗಳು ಷಡ್ಯಂತ್ರ ಮಾಡಿದ್ದಾರೆ. ಆ ರಾಜಕೀಯ ವಿರೋಧಿಗಳು ಪಕ್ಷದವರಾ? ಹೊರಗಿನವರಾ ಎಂಬುದನ್ನು ನಾನು ಹೇಳಲ್ಲ. ಅವರು ರಾಜಕೀಯ ವಿರೋಧಿಗಳು ಅಂತ ಮಾತ್ರ ಹೇಳುತ್ತೇನೆ ನೀವೇ ಅರ್ಥ ಮಾಡಿಕೊಳ್ಳಿ ಎಂದು ಹೇಳಿದರು.
Laxmi News 24×7