Breaking News

ರಾಷ್ಟ್ರಪತಿಯವರಿಂದ ದಸರಾ ಉದ್ಘಾಟನೆ: ಸಾರ್ವಜನಿಕರಿಗೆ ಚಾಮುಂಡೇಶ್ವರಿ ದರ್ಶನಕ್ಕೆ ನಿರ್ಬಂಧ

Spread the love

ಮೈಸೂರು: ಸೆಪ್ಟಂಬರ್ 26 ರಂದು ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಯವರ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ಅಂದು ಕೆಲವು ಗಂಟೆಗಳವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಸ್ಧಾನದಲ್ಲಿ ದೇವರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ.

 

ಅಂದು ರಾಷ್ಟ್ರಪತಿಯವರ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಭಾಗವಹಿಸಬಹುದಾಗಿದೆ. ಕಾರ್ಯಕ್ರಮ ಮುಗಿದ ನಂತರ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಇದೇ ಮೊದಲ ಬಾರಿಗೆ ರಾಷ್ಟ್ರಪತಿಯೊಬ್ಬರು ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ. ದ್ರೌಪದಿ ಮುರ್ಮು ಅವರು ರಾಷ್ಟ್ರಪತಿಯಾದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ