Breaking News

ಮೈಸೂರಿನಲ್ಲೇ ತಯಾರಾದ ರೇಷ್ಮೆ ಸೀರೆಯುಟ್ಟು ದಸರೆಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Spread the love

ಮೈಸೂರು: ದಸರಾ ಮಹೋತ್ಸವ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನಲ್ಲೇ ತಯಾರಾದ ರೇಷ್ಮೆ ಸೀರೆ ಧರಿಸಿ, ದಸರಾ ಉದ್ಘಾಟಿಸುವ ಮೂಲಕ ಮೈಸೂರಿಗೆ ವಿಶೇಷ ಗೌರವ ನೀಡಿದ್ದಾರೆ.

ರಾಷ್ಟ್ರಪತಿಯವರಿಗಾಗಿ ವಿಶೇಷವಾಗಿ ನೇಯ್ದ ಮೈಸೂರು ರೇಷ್ಮೆ ಸೀರೆ ಇದು.

ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಜಿಲ್ಲಾಡಳಿತದ ಪರವಾಗಿ ರಾಷ್ಟ್ರಪತಿಯವರನ್ನು ಅಧಿಕೃತವಾಗಿ ಆಹ್ವಾನಿಸುವಾಗ ಗೌರವ ಸೂಚಕವಾಗಿ ಈ ಮೈಸೂರು ರೇಷ್ಮೆ ಸೀರೆ, ಫಲ ತಾಂಬೂಲ ನೀಡಿ ಗೌರವಿಸಿದ್ದರು. ಇದೇ ಉಡುಪು ಧರಿಸಿ ರಾಷ್ಟ್ರಪತಿಯವರು ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿದ್ದು ಮೈಸೂರಿಗರಿಗೆ ಸಂತಸ ತಂದಿದೆ.

ರಾಷ್ಟ್ರಪತಿಯವರು ಬಿಳಿ ಸೀರೆ ಇಷ್ಟಪಡುತ್ತಾರೆ ಎಂಬುದನ್ನು ಅರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರಿ ಸ್ವಾಮ್ಯದ ಕೆ.ಎಸ್.ಐ.ಸಿ.ಯ ಸರ್ಕಾರಿ ರೇಷ್ಮೆ ಕಾರ್ಖಾನೆಗೆ ಈ ಉಡುಪು ತಯಾರಿಕೆಗೆ ಆದೇಶ ನೀಡಿದ್ದರು.

ಮೈಸೂರಿನ ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1912ರಲ್ಲಿ ನಿರ್ಮಿಸಿದ ರೇಷ್ಮೆ ಕಾರ್ಖಾನೆ ಎಂಬ ಹೆಮ್ಮೆ ಈ ಕಾರ್ಖಾನೆಗೆ ಇದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ