Breaking News

ಒಂಬತ್ತು ತಿಂಗಳ ಹಿಂದೆ ಬಿದ್ದು ಹೋಗಿದೆ. ಆದರೆ ಇಲ್ಲಿಯ ತನಕ ಅವರಿಗೆ ಯಾವುದೇ ಪರಿಹಾರ ನೀಡಿಲ್ಲ. ಹಾಗಾಗಿಆತ್ಮಹತ್ಯೆ ಬೆದರಿಕೆ ಹಾಕಿದ ನೆರೆ ಸಂತ್ರಸ್ತ

Spread the love

ಬೆಳಗಾವಿ: ಅತಿವೃಷ್ಟಿಯಿಂದ ಮನೆ ಬಿದ್ದು 9 ತಿಂಗಳು‌ ಕಳೆದರೂ, ಪರಿಹಾರ ನೀಡದ ಹಿನ್ನೆಲೆ ಮನೆ ನಿರ್ಮಿಸಿ ಕೊಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವ್ಯಕ್ತಿಯೊಬ್ಬರು ವಿಡಿಯೋ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಸದ್ಯ ನೆರೆ ಸಂತ್ರಸ್ತ ವ್ಯಕ್ತಿಯ ಈ ವಿಡಿಯೋ ವೈರಲ್​ ಆಗುತ್ತಿದೆ.

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಕಕ್ಕೇರಿ ಗ್ರಾಮದ ಈರಪ್ಪ ನಾಡಗೌಡ್ರ ಎಂಬುವರು ಮೊಬೈಲ್ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಅಲ್ಲದೇ ಶಾಸಕಿ ಅಂಜಲಿ‌‌‌ ನಿಂಬಾಳ್ಕರ್ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಿರಂತರ ಮಳೆಗೆ ಕಳೆದ ನವೆಂಬರ್‌ನಲ್ಲಿ ಅವರ ಮನೆ ನೆಲಸಮವಾಗಿತ್ತು. ಮನೆ ಬಿದ್ದರೂ ಪರಿಹಾರ ನೀಡಿಲ್ಲ. ಶಾಸಕಿ ಅಂಜಲಿ ನಿಂಬಾಳ್ಕರ್, ಖಾನಾಪುರ ತಹಶೀಲ್ದಾರ್, ಬೆಳಗಾವಿ ಡಿಸಿ, ಲೋಕಾಯುಕ್ತ, ಸಿಎಂಗೆ ಪತ್ರ ಬರೆದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೋಸಿ ಹೋಗಿರುವ ನೆರೆ ಸಂತ್ರಸ್ತ ಈರಪ್ಪ ಮೊಬೈಲ್ ವಿಡಿಯೋ ಮಾಡಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ನೆರೆ ಸಂತ್ರಸ್ತ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ