Breaking News

ಐಐಐಟಿ ಧಾರವಾಡ ಘಟಕ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Spread the love

ಧಾರವಾಡ: ಇಲ್ಲಿನ ತಡಸಿನಕೊಪ್ಪದಲ್ಲಿ ನಿರ್ಮಾಣಗೊಂಡಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಯನ್ನು ಹಾಗೂ ನೂತನ‌ ಕ್ಯಾಂಪಸನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಿದರು.

ಸಂಸ್ಥೆಯ ಅಧ್ಯಕ್ಷೆ ಹಾಗೂ ಇನ್ಪೊಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ರಾಷ್ಟಪತಿ ಅವರನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಇದ್ದರು.

ರಾಷ್ಟ್ರಪತಿ ಅವರಿಗೆ ಐಐಐಟಿ ಕ್ಯಾಂಪಸ್ ನಲ್ಲಿ ಗ್ರೀನ್ ರೂಮ್ ಸ್ಥಾಪಿಸಲಾಗಿದ್ದು, ಅವರಿಗಾಗಿ ವಿಶೇಷ ಊಟದ ವ್ಯವಸ್ಥೆ ಮಾಡಲಾಗಿತ್ತು. ಉತ್ತರ ಕರ್ನಾಟಕ ಶೈಲಿಯ ಸಾಂಪ್ರದಾಯಿಕ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.ಉದ್ಘಾಟನಾ ಕಾರ್ಯಕ್ರಮ ನಡೆಯಲಿರುವ ಸಭಾಂಗಣದಲ್ಲಿ 700 ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳು, ಅಧಿಕಾರಿಗಳು, ಆಹ್ವಾನಿತ ಗಣ್ಯರು, ಭಾರತೀಯ ತಾಂತ್ರಜ್ಞಾನ ಸಂಸ್ಥೆ (ಐಐಟಿ) ಅಧಿಕಾರಿಗಳು ಉಪಸ್ಥಿತರಿದ್ದರು.

https://twitter.com/i/broadcasts/1gqxvyeanmnJB?ref_src=twsrc%5Etfw%7Ctwcamp%5Etweetembed%7Ctwterm%5E1574352041807253507%7Ctwgr%5E7b24f959a11c1c001edb4d2e8e53219ddcddbae2%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fudayavani-epaper-udayavani%2Fbreaking-updates-breaking


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ