ಮುಂಬೈ: ಅನುಷ್ಕಾ ಶರ್ಮಾ ಬಗ್ಗೆ ನಾನು ಕೆಟ್ಟದಾಗಿ ಮಾತನಾಡಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಮಾಜಿ ಕ್ರಿಕೆಟಿಗ ಮತ್ತು ವಿಶ್ಲೇಷಕ ಸುನಿಲ್ ಗವಾಸ್ಕರ್ ಅವರು ಹೇಳಿದ್ದಾರೆ.
ಗುರುವಾರ ನಡೆದ ಪಂಜಾಬ್ ಮತ್ತು ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಳಪೆ ಪ್ರದರ್ಶನ ತೋರಿದ್ದರು. ಜೊತೆಗೆ ಎರಡು ಸುಲಭದ ಕ್ಯಾಚನ್ನು ಕೈಚೆಲ್ಲಿದ್ದರು. ಈ ವೇಳೆ ಕಮೆಂಟರಿ ಮಾಡುತ್ತಿದ್ದ ಸುನಿಲ್ ಗವಾಸ್ಕರ್ ಅವರು ಕೊಹ್ಲಿ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿ ಅವರ ಪತ್ನಿ ಅನುಷ್ಕಾಳನ್ನು ಅಲ್ಲಿಗೆ ಎಳೆದು ತಂದಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಈಗ ಇದರ ಬಗ್ಗೆ ಸ್ಪಷ್ಟೀಕರಣ ನೀಡಿರುವ ಸುನಿಲ್ ಗವಾಸ್ಕರ್, ನಾನು ಅಕಾಶ್ ಚೋಪ್ರಾ ಹಿಂದಿ ಮಾಧ್ಯಮವೊಂದಕ್ಕೆ ಕಮೆಂಟರಿ ಮಾಡುತ್ತಿದ್ದೇವು. ಆಗ ಅಕಾಶ್ ಆಟಗಾರರಿಗೆ ಅಭ್ಯಾಸ ಮಾಡಲು ಕಮ್ಮಿ ಸಮಯ ಸಿಕ್ಕಿದೆ ಎಂದರು. ಅದಕ್ಕೆ ನಾನು ಹೌದು ರೋಹಿತ್ ಶರ್ಮಾ ಕೂಡ ಮೊದಲ ಪಂದ್ಯದಲ್ಲಿ ಸರಿಯಾಗಿ ಬ್ಯಾಟ್ ಬೀಸಲಿಲ್ಲ. ಧೋನಿ ಕೂಡ ಸರಿಯಾಗಿ ಆಡಲಿಲ್ಲ. ಈಗ ಕೊಹ್ಲಿ ಕೂಡ ಬ್ಯಾಟ್ ಮಾಡಲು ಕಷ್ಟ ಪಡುತ್ತಿದ್ದಾರೆ ಎಂದಿದ್ದೆ.

ಇದರ ಮುಂದುವರಿದ ಭಾಗವಾಗಿ ನಾನು, ಕೊರೊನಾ ಲಾಕ್‍ಡೌನ್ ಸಮಯದಲ್ಲೂ ಕೂಡ ವಿರಾಟ್ ಅಭ್ಯಾಸ ಮಾಡಿರಲಿಲ್ಲ. ಅವರು ಅವರ ಪತ್ನಿ ಅನುಷ್ಕಾ ಜೊತೆ ಟಿನ್ನಿಸ್ ಬಾಲಿನಲ್ಲಿ ಅವರ ಅಪಾರ್ಟ್‍ಮೆಂಟ್ ಒಳಗೆ ಅಭ್ಯಾಸ ಮಾಡುತ್ತಿದ್ದರು ಎಂದಿದ್ದೇನೆ. ಕೊರೊನಾ ಲಾಕ್‍ಡೌನ್ ಸಮಯದಲ್ಲಿ ವಿರಾಟ್ ಮತ್ತು ಅನುಷ್ಕಾ ಕ್ರಿಕೆಟ್ ಆಡುತ್ತಿರುವ ವಿಡಿಯೋ ವೈರಲ್ ಆಗಿತ್ತು ಇದನ್ನು ಗಮನದಲ್ಲಿಟ್ಟುಕೊಂಡು ಆ ರೀತಿ ಹೇಳಿದ್ದೇನೆ ಎಂದು ಗವಾಸ್ಕರ್ ಗಾಳಿ ಸುದ್ದಿಗೆ ತೆರೆ ಎಳಿದ್ದಾರೆ.
Laxmi News 24×7