ತಮ್ಮ ಅಮೋಘ ಅಭಿನಯದ ಮೂಲಕ ಟಿಕ್‍ಟಾಕ್ ಮತ್ತು ಯೂಟೂಬ್ ಸ್ಟಾರ್ ಆಗಿ ಮನೆ ಮಾತಾಗಿದ್ದ ಬೈಲಹೊಂಗಲ ತಾಲೂಕಿನ ತಿರುಳ್ಗನ್ನಡನಾಡು ಒಕ್ಕುಂದ ಗ್ರಾಮದ ಅಜ್ಜಿ ರುಕ್ಮವ್ವ ಗೋವಿಂದಪ್ಪ ಲೋಕರಿ ವಯೋಸಹಜ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ಮೃತರಾಗಿದ್ದಾರೆ.
ಹೌದು ಟಿಕ್‍ಟಾಕ್‍ನಲ್ಲಿ ತಮ್ಮ ವಿಭಿನ್ನ ಕಾಮಿಡಿ ವಿಡಿಯೋ ಮೂಲಕ ಈ ರುಕ್ಮವ್ವ ಅಜ್ಜಿ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದರು. ಅಲ್ಲದೇ ಹಲವು ವಾಹಿನಿಗಳ ಕಾಮಿಡಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ಇಳಿ ವಯಸ್ಸಿಲ್ಲಿಯೂ ತಮ್ಮಲ್ಲಿನ ಕಲೆಯನ್ನು ಪ್ರದರ್ಶಿಸಿದ್ದರು. ಟಿಕ್‍ಟಾಕ್ ಹಾಗೂ ಕಾಮಿಡಿ ವಿಡಿಯೋದಲ್ಲಿ ತಮ್ಮ ಛಾಪನ್ನು ಮೂಡಿಸಿರುವ ಒಕ್ಕುಂದ ಗ್ರಾಮದ ಫಕೀರ್ ಕಾಂಬಳೆ, ಮಂಜುನಾಥ್ ಬುಚಡಿ ಅವರ ತಂಡದಲ್ಲಿ ಅನೇಕ ಕಾಮಿಡಿ ವಿಡಿಯೋಗಳಲ್ಲಿ ಕಾಣಿಸಿಕೊಂಡಿದ್ದ ರುಕ್ಮವ್ವ ಅಜ್ಜಿ ಬಹಳ ಅದ್ಭುತವಾಗಿ ಅಭಿನಯಿಸಿದ್ದರು. ಅವರ ಉತ್ತರಕರ್ನಾಟಕ ಶೈಲಿಯ ಬೈಗುಳಗಳಿಗೆ ಜನ ಫುಲ್ ಫಿದಾ ಆಗಿದ್ದರು.
Laxmi News 24×7