Breaking News

ಎರಡ್ಮೂರು ದಿನದಲ್ಲಿ ಸಂಪುಟ ವಿಸ್ತರಣೆ; ನವರಾತ್ರಿಯಲ್ಲೇ ಹಲವರಿಗೆ ಶುಭ ಯೋಗ

Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ವಾರ ದೆಹಲಿಗೆ ಭೇಟಿ ನೀಡಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.

ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಈ ತಿಂಗಳ ಅಂತ್ಯದೊಳಗೆ ನಡೆಯುವ ಸಾಧ್ಯತೆ ಇರುವುದರಿಂದ ವರಿಷ್ಠರ ಅನುಮತಿ ಪಡೆಯಲು ದೆಹಲಿಗೆ ತೆರಳಲಿದ್ದಾರೆ.

ಒಂದು ಮೂಲದ ಪ್ರಕಾರ ಗುರುವಾರ ಇಲ್ಲವೇ ಶುಕ್ರವಾರವೇ ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗುವ ಸಾಧ್ಯತೆ ಇದೆ. ‌ಇಲ್ಲವಾದರೆ ನವರಾತ್ರಿ ಬಳಿಕ‌ ಮುಹೂರ್ತ ಕೂಡಿ ಬರಲಿದೆ.

ಇತ್ತೀಚೆಗೆ ಮುಗಿದ ಅವೇಶನದ ಸಂದರ್ಭದಲ್ಲಿ ಬೊಮ್ಮಾಯಿ ಅವರು ಶೀಘ್ರದಲ್ಲೇ ದೆಹಲಿಗೆ ತೆರಳಿ ಇಲ್ಲವೇ ಪಕ್ಷದ ವರಿಷ್ಠರ ಜೊತೆ ಚರ್ಚಿಸಿ, ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಕುರಿತಾಗಿ ಮಾತುಕತೆ ನಡೆಸುತ್ತೇನೆ ಎಂದು ಹೇಳಿದ್ದರು.

ದೆಹಲಿಗೆ ತೆರಳುವ ಸಮಯ ಈವರೆಗೂ ಅಧಿಕೃತವಾಗಿಲ್ಲ. ಒಂದು ವೇಳೆ ಇಲ್ಲಿಗೆ ಬರುವ ಅಗತ್ಯವಿಲ್ಲ ಎಂದು ಸೂಚಿಸಿದರೆ ಎರಡು ಮೂರು ದಿನಗಳಲ್ಲಿ ವಿಸ್ತರಣೆ ದಿನಾಂಕ ನಿಗದಿಯಾಗುವ ಲಕ್ಷಣಗಳು ಗೋಚರಿಸಿವೆ.

ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಬೇಕೆಂದು ಆಕಾಂಕ್ಷಿಗಳು ಒತ್ತಡ ಹಾಕುತ್ತಲೇ ಇದ್ದಾರೆ. ಚುನಾವಣಾ ವರ್ಷವಾಗಿರುವುದರಿಂದ ಯಾವುದಾದರೊಂದು ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕೆಂದು ಎರಡು ಡಜನ್ ಶಾಸಕರು ಸಿಎಂ ಮೇಲೆ ನಿರಂತರವಾಗಿ ಒತ್ತಡ ಹೇರುತ್ತಿದ್ದಾರೆ.

ಮತ್ತೊಂದೆಡೆ ಬಿಜೆಪಿ ಕೇಂದ್ರ ನಾಯಕರು ಕೂಡ ಸಂಪುಟ ವಿಸ್ತರಣೆಗೆ ಉತ್ಸುಕರಾಗಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದರು. ರಮೇಶ್ ಜಾರಕಿಹೊಳಿ ಮತ್ತು ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡಿದ್ದು, ಸಚಿವ ಉಮೇಶ್ ಕತ್ತಿ ನಿಧನರಾಗಿದ್ದಾರೆ. ಹೀಗಾಗಿ ಬೊಮ್ಮಾಯಿ ಅವರು ತಮ್ಮ ಹಿಂದಿನ ಹಣಕಾಸು ಮತ್ತು ಬೆಂಗಳೂರು ಅಭಿವೃದ್ಧಿ ಖಾತೆಗಳೊಂದಿಗೆ ಹಲವಾರು ಮಹತ್ವದ ಖಾತೆಗಳನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ