Breaking News
Home / Uncategorized / ಹೊಸ ಕೃಷಿ ಸುಧಾರಣೆಗಳು ರೈತರಿಗೆ ಅರ್ಥವಾಗಬೇಕು – ಮೋದಿ

ಹೊಸ ಕೃಷಿ ಸುಧಾರಣೆಗಳು ರೈತರಿಗೆ ಅರ್ಥವಾಗಬೇಕು – ಮೋದಿ

Spread the love

ನವದೆಹಲಿ: ಹಿಂದಿನ ಸರ್ಕಾರಗಳು ರೈತರಿಗೆ ಮತ್ತು ಕಾರ್ಮಿಕರಿಗೆ ಅರ್ಥವಾಗದ ಭರವಸೆ ಮತ್ತು ಕಾನೂನುಗಳನ್ನು ರೂಪಿಸಿದೆ. ಅದನ್ನು ಬದಲಿಸಲು ಎನ್‍ಡಿಎ ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ. ಹೊಸ ಕೃಷಿ ಸುಧಾರಣೆಗಳು ರೈತರಿಗೆ ಅರ್ಥವಾಗಬೇಕಿದ್ದು, ಬಿಜೆಪಿ ಕಾರ್ಯಕರ್ತರು ರೈತರ ಬಳಿ ಹೋಗಿ ಸುಲಭ ಭಾಷೆಯಲ್ಲಿ ಅರ್ಥೈಸಿ ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಹಿನ್ನಲೆಯಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಎನ್‍ಡಿಎ ಸರ್ಕಾರ ರೈತ ಪರ ಹಲವು ಮಹತ್ವದ ನಿರ್ಧಾರಗಳನ್ನು ತಗೆದುಕೊಂಡಿದೆ ಎಂದರು.

ಎನ್‍ಡಿಎ ಸರ್ಕಾರ ತನ್ನ ಅವಧಿಯಲ್ಲಿ ರೈತರನ್ನು ಬ್ಯಾಂಕುಗಳೊಂದಿಗೆ ಸಂಪರ್ಕಿಸಿದೆ. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಒಂದು ಲಕ್ಷ ಕೋಟಿ ನೆರವು ನೀಡಿದ್ದು, ಇದರಿಂದ 10 ಲಕ್ಷ ಕೋಟಿ ರೈತರಿಗೆ ನೆರವಾಗಿದೆ. ಜೊತೆಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಿಂದ ರೈತರಿಗೆ ಸುಲಭವಾಗಿ ಸಾಲ ಸಿಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ಹೊಸ ನೀತಿಗಳು ಮಹತ್ವದ ಬದಲಾವಣೆ ತಂದಿದೆ ಕಾರ್ಮಿಕರ ಜೀವನವನ್ನು ಬದಲಿಸಿದೆ. ಈವರೆಗೂ 30% ಕಾರ್ಮಿಕರು ಕನಿಷ್ಠ ವೇತನದ ಅಡಿ ಇದ್ದರು ಹೊಸ ಕಾನೂನಿನ ಮೂಲಕ ಅಸಂಘಟಿತ ವರ್ಗ ಮತ್ತು ಎಲ್ಲ ಕೈಗಾರಿಕಾ ಕಾರ್ಮಿಕರನ್ನು ಈ ವ್ಯಾಪ್ತಿಗೆ ತರಲಾಗಿದೆ. ಸ್ವಾತಂತ್ರ್ಯದ ಬಳಿಕ ರೈತರು ಮತ್ತು ಕಾರ್ಮಿಕರಿಗೆ ದೊಡ್ಡ ಭರವಸೆಗಳನ್ನು ನೀಡಲಾಗಿತ್ತು. ಚುನಾವಣಾ ಸಂದರ್ಭದಲ್ಲಿ ದೊಡ್ಡ ಪ್ರಣಾಳಿಕೆ ನೀಡಲಾಗಿತ್ತು. ಆದರೆ ಇದ್ಯಾವುದು ಜಾರಿಗೆ ಬಂದಿಲ್ಲ ಎಂದರು.


Spread the love

About Laxminews 24x7

Check Also

ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ

Spread the love ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೃತಳ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಪೊಲೀಸ್ ಭದ್ರತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ