ನವದೆಹಲಿ: 2020ರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿರುವ ಜೆ.ಪಿ.ನಡ್ಡಾ ಅವರು ಇನ್ನೂ 2 ವರ್ಷಗಳ ಕಾಲ ಅದೇ ಹುದ್ದೆಯಲ್ಲಿ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ.
ನಿಗದಿಯಂತೆ 2023ರ ಜ.20ರಂದು ನಡ್ಡಾ ಅವರ 3 ವರ್ಷಗಳ ಅಧಿಕಾರಾವಧಿ ಪೂರ್ಣಗೊಳ್ಳಲಿದೆ.
ಆದರೆ, ಮುಂದಿನ ಲೋಕಸಭೆ ಚುನಾವಣೆಗೆ ಇನ್ನು ಎರಡೇ ವರ್ಷಗಳು ಬಾಕಿ ಇವೆ. ಅಲ್ಲದೇ, ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳೂ ನಡೆಯಲಿವೆ.
ಹೀಗಾಗಿ, ನಡ್ಡಾ ಅವರ ಅಧಿಕಾರಾವಧಿಯನ್ನು 2024ರ ಲೋಕಸಭೆ ಚುನಾವಣೆಯವರೆಗೆ ವಿಸ್ತರಿಸಲು ಬಿಜೆಪಿ ಕೇಂದ್ರ ನಾಯಕತ್ವ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
Laxmi News 24×7