Breaking News

“ಲಂಚ ಕೊಡಬೇಕಾಗಿಲ್ಲ’ ಬೋರ್ಡ್‌ ಬದಲು ಸಿಸಿ ಕೆಮರಾ ಅಳವಡಿಸಿ: ಸಿದ್ದರಾಮಯ್ಯ

Spread the love

ಬೆಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿ ಅವರೇ, “ಸರಕಾರಿ ಕಚೇರಿಗಳಲ್ಲಿ ಲಂಚ ಕೊಡಬೇಕಾಗಿಲ್ಲ’ ಎಂಬ ಬೋರ್ಡ್‌ ಅಳವಡಿಸುವ ಮೊದಲು ಎಲ್ಲ ಸರಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಸಿಸಿ ಕೆಮರಾಗಳನ್ನು ಅಳವಡಿಸಿ. ನೊಂದ ಜನರು ದೂರು ಕೊಟ್ಟರೆ ಭ್ರಷ್ಟ ಅಧಿಕಾರಿಗಳ ವಿರುದ್ಧ ತತ್‌ಕ್ಷಣ ಕ್ರಮ ಕೈಗೊಳ್ಳಿ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಆಗ್ರಹಿಸಿದ್ದಾರೆ.

 

ಮುಖ್ಯಮಂತ್ರಿಯವರೇ, ಈ ಬೋರ್ಡ್‌ ಬರೆಸಿ ಹಾಕುವ ನಾಟಕಗಳನ್ನೆಲ್ಲ ನಿಲ್ಲಿಸಿ. ಮೊದಲು 40 ಪರ್ಸೆಂಟ್‌ ಕಮಿಷನ್‌ ಆರೋಪ ಸಹಿತ ಸಚಿವರ ಮೇಲಿನ ಭ್ರಷ್ಟಾಚಾರದ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಿ ಎಂದು ಕುಟುಕಿದ್ದಾರೆ.


Spread the love

About Laxminews 24x7

Check Also

ಮಹಿಳೆ ಸೃಷ್ಠಿಯ ಮೂಲ: ಡಾ. ಲತಾ

Spread the loveಬಾಗಲಕೋಟೆ : ದೃಡ ಮನಸ್ಸು ಮತ್ತು ಪರಿಶ್ರಮವಿದ್ದರೆ ಏನನ್ನೂ ಬೇಕಾದರೂ ಸಾದಿಸಬಹುದು. ಛಲ ಇಟ್ಟಕೊಂಡರೆ ಎಲ್ಲವೂ ಸಾಧ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ