ಮೈಸೂರು: ಮೈಸೂರು ದಸರಾ 2022 ಹಿನ್ನೆಲೆ ನಾಳೆಯಿಂದ ನಡೆಯಲಿರುವ ಯುವ ದಸರಾ ಅಂಗವಾಗಿ ನಾಳೆ ಅಪ್ಪು ನಮನ ಕಾರ್ಯಕ್ರಮ ಅನ್ನು ದಿವಂಗತ ಪುನೀತ್ ರಾಜ್ಕುಮಾರ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
ಇಂದು ಯುವ ದಸರಾ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಸಚಿವರು, ಸೆ.28ಕ್ಕೆ (ನಾಳೆ) “ಅಪ್ಪು ನಮನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದಸರಾಗೆ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ. ಯುವ ದಸರಾದಲ್ಲಿ ಗೋಲ್ಡ್ ಪಾಸ್ ಹೊರತುಪಡಿಸಿ ಯಾವುದೇ ಪಾಸ್ ಇರುವುದಿಲ್ಲ ಎಂದರು
ಯುವ ಸಂಭ್ರಮ/ಯುವ ದಸರಾ ಉಪ ಸಮಿತಿ ವತಿಯಿಂದ ನಾಳೆಯಿಂದ ಅ.3ರವರೆಗೆ ಯುವ ದಸರಾ ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಯುವ ದಸರಾ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ನಟ ಶಿವರಾಜ್ಕುಮಾರ್ ಆಗಮಿಸಲಿದ್ದಾರೆ. ಶಾಸಕ ಎಲ್. ನಾಗೇಂದ್ರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ನಾಳೆ ಸಂಜೆ 7ಗಂಟೆಯಿಂದ ಅಪ್ಪು ನಮನ ಕಾರ್ಯಕ್ರಮ ಜರುಗಲಿದ್ದು, ಖ್ಯಾತ ಹಿನ್ನೆಲೆ ಗಾಯಕರಾದ ಗುರುಕಿರಣ್, ವಿಜಯ್ ಪ್ರಕಾಶ್, ಕುನಾಲ್ ಗಾಂಜಾವಾಲ ಕಾರ್ಯಕ್ರಮ ನೀಡಲಿದ್ದಾರೆ.
Laxmi News 24×7