Breaking News
Home / ಜಿಲ್ಲೆ / ಬೆಳಗಾವಿ / ಅಥಣಿ / ಮಾತಿಗೆ ತಪ್ಪಿದರೆ ನವೆಂಬರ್ 2ನೇ ವಾರದಲ್ಲಿ ಬೆಂಗಳೂರಿನಲ್ಲಿ ಪಂಚಮಸಾಲಿ ಸಮಾಜದಿಂದ 25 ಲಕ್ಷ ಜನಸಂಖ್ಯೆ ಸೇರಿ ವಿಧಾನಸೌಧ ಮುಂದೆ ಪ್ರತಿಭಟನೆ

ಮಾತಿಗೆ ತಪ್ಪಿದರೆ ನವೆಂಬರ್ 2ನೇ ವಾರದಲ್ಲಿ ಬೆಂಗಳೂರಿನಲ್ಲಿ ಪಂಚಮಸಾಲಿ ಸಮಾಜದಿಂದ 25 ಲಕ್ಷ ಜನಸಂಖ್ಯೆ ಸೇರಿ ವಿಧಾನಸೌಧ ಮುಂದೆ ಪ್ರತಿಭಟನೆ

Spread the love

ಅಥಣಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾನಸ ಪುತ್ರರಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಕೂಡಲಸಂಗಮ ಪೀಠದ ಶ್ರೀಗಳು ಹಾಗೂ ಪಂಚಮಸಾಲಿ ಸಮಾಜದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ಅಥಣಿ ಪಟ್ಟಣದಲ್ಲಿ ನಡೆದ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೈಕ್ಷಣಿಕವಾಗಿ ಆರ್ಥಿಕವಾಗಿ, ಹಿಂದುಳಿದ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೇಳುತ್ತಿದ್ದೇವೆ. ದಶಕಗಳ ಹೋರಾಟವಾಗಿದ್ದರು ಸರ್ಕಾರ ಹಾಗೂ ಮುಖ್ಯಮಂತ್ರಿಗಳಿಂದ ನಂಬಿಕೆಗೆ ಚ್ಯುತಿ ತರುವಂತ ಕಾರ್ಯಗಳು ನಡೆಯುತ್ತಿವೆ. ಕಳೆದ ವಾರ ಸದನದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಗಬೇಕೆಂದು ಧ್ವನಿ ಕೂಡಿಸಿದ್ದಾರೆ. ಆದರೆ ಸದನದಲ್ಲಿ ಮಾತನಾಡಿ ಅಷ್ಟಕ್ಕೇ ಸುಮ್ಮನಾಗಬಾರದು. ಬಿ ಎಸ್ ವೈ ಮಾನಸಪುತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಜಯಮೃತ್ಯುಂಜಯ ಸ್ವಾಮೀಜಿ ಬಿಎಸ್​ವೈ ಅವರಿಗೆ ಸಲಹೆ ನೀಡಿದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ