Breaking News

ಮುರುಘಾಶ್ರೀಗಳಿಗೆ ಮತ್ತೊಂದು ಶಾಕ್ : ಸೆ.29 ಕ್ಕೆ ಮಠದ ಪೀಠತ್ಯಾಗ ಚರ್ಚೆಗೆ ಮಹತ್ವದ ಸಭೆ

Spread the love

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾಶ್ರೀಳಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಸೆ. 29 ರಂದು ಮುರುಘಾ ಶರಣರ ಪೀಠತ್ಯಾಗದ ಚರ್ಚೆಗೆ ವೀರಶೈವ ಸಮಾಜದ ಮುಖಂಡರು ಸಭೆ ಕರೆಯಲಾಗಿದೆ.

 

 

ಮುರುಘಾ ಶ್ರೀಗಳು ಪೀಠತ್ಯಾಗ ಮಾಡದೇ ಇರುವುದರಿಂದ ಶ್ರೀಮಠದ ದೈನಂದಿನ ಧಾರ್ಮಿಕ ಮತ್ತು ಆಡಳಿತಾತ್ಮಕ ಚಟುವಟಿಕೆಗಳ ನಿರ್ವಹಣೆ ಸವಾಲು ಎದುರಾಗಿದ್ದು, ಈ ಕುರಿತು ಚರ್ಚಿಸಲು ಸೆ.29 ರಂದು ವೀರಶೈವ ಸಮಾಜದ ಮುಖಂಡರ ಸಭೆ ಕರೆಯಲಾಗಿದೆ.

 

ಮಾಜಿ ಸಚಿವ ಹೆಚ್. ಏಕಾಂತಯ್ಯ ಅವರ ನೇತೃತ್ವದಲ್ಲಿ ಸಿಬಾರದ ಎಸ್ಸೆನ್ ಸ್ಮಾರಕದಲ್ಲಿ ಅಂದು ಬೆಳಗ್ಗೆ 11.30 ಕ್ಕೆ ಸಭೆ ಕರೆಯಲಾಗಿದ್ದು, ಸಭೆಯ ಕುರಿತು ಸಮಾಜದ ಮುಖಂಡರಿಗೆ ಪತ್ರವೊಂದನ್ನು ಕಳುಹಿಸಲಾಗಿದೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ