Breaking News
Home / ರಾಜಕೀಯ / ರೈತರೇ ಗಮನಿಸಿ : ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ : ಪಶುಪಾಲನಾ ಇಲಾಖೆ ಎಚ್ಚರಿಕೆ

ರೈತರೇ ಗಮನಿಸಿ : ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ : ಪಶುಪಾಲನಾ ಇಲಾಖೆ ಎಚ್ಚರಿಕೆ

Spread the love

ಬೆಳಗಾವಿ : ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ.

ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷಣವಾಗಿ ಕಾಣಿಸಿಕೊಳ್ಳುತ್ತದೆ.

ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ತಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ.

ಚರ್ಮಗಂಟು ರೋಗದ ಲಕ್ಷಣಗಳು:

  • ಅತಿಯಾದ ಜ್ವರ (೧೦೫-೧೮೦ಈ)ಕಣ್ಣುಗಳಿಂದ ನೀರು ಸೋರುವುದು.
  • ನಿಶಕ್ತಿ, ಕಾಲುಗಳಲ್ಲಿ ಬಾವು ಹಾಗೂ ಕಂಟುವುದು
  • ಜಾನುವಾರುಗಳ ಚರ್ಮದ ಮೇಲೆ ೨-೫ ಸೆ.ಮೀ.ನಷ್ಟು ಅಗಲವಿರುವ ಗುಳ್ಳೆ ಕಾಣಿಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ನೊಣಗಳಿಂದ ಹುಳುಗಳು ಬಿದ್ದು ಹುಣ್ಣಾಗುತ್ತದೆ.
  • ಹಾಲಿನ ಇಳುವರಿ ಕಡಿಮೆಯಾಗುವುದು ಕೆಲಸದ ಸಾಮರ್ಥ್ಯ ಕುಂಠಿತವಾಗುತ್ತದೆ. ಕರುಗಳು ತೀವ್ರವಾಗಿ ಬಳಲಿ ಸಾವಿಗೀಡಾಗಬಹುದು.
  • ಮಿಶ್ರತಳಿ ಜರ್ಸಿ,ಹೆಚ್.ಎಫ್. ರಾಸುಗಳು ಹಾಗೂ ಕರುಗಳು ಈ ರೋಗದಿಂದ ಹೆಚ್ಚು ಬಳಲುತ್ತವೆ

ರೋಗ ಹರಡುವಿಕೆ:

  • ಸೊಳ್ಳೆ, ಉಣ್ಣೆ , ನೊಣ ಹಾಗೂ ವಿವಿಧ ಕಚ್ಚುವ ಕೀಟಗಳಿಂದ
  • ಕಲುಷಿತಗೊAಡ ನೀರು ಹಾಗೂ ಆಹಾರದಿಂದ
  • ಜಾನುವರುಗಳ ನೇರ ಸಂಪರ್ಕದಿAದ
  • ರೋಗ ಹರಡುವಿಕೆ ಪ್ರಮಾಣ ೧೦-೨೦%ರಷ್ಟು ಹಗೂ ರೋಗದ ಸಾವಿನ ಪ್ರಮಾಣ ೧-೫% ಇರುತ್ತದೆ.

ಚರ್ಮಗಂಟು ರೋಗದ ಚಿಕಿತ್ಸೆ ಹಾಗೂ ತಡೆಗಟ್ಟುವಿಕೆ:

  • ಈ ರೋಗವು ವೈರಾಣು ರೋಗವಾಗಿರುವುದರಿಂದ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ಹಾಗೂ ಈ ರೋಗಕ್ಕೆ ಯಾವುದೇ ಲಸಿಕೆ ಲಭ್ಯವಿರುವುದಿಲ್ಲ
  • ಜಾನುವಾರುಗಳಿಗೆ ರೋಗದ ಲಕ್ಷಣಗಳ ತಕ್ಕಂತೆ ಚಿಕಿತ್ಸೆ ನೀಡಬೇಕಾಗುತ್ತದೆ.
  • ದೇಹವನ್ನು ತಂಪಾಗಿಸಲು ಮೈಮೇಲೆ ಹಸಿ ಬಟ್ಟೆ ಹಾಕುವುದು ಹಾಗೂ ತಂಪಾದ ಜಾಗದಲ್ಲಿ ಕಟ್ಟುವುದು
  • ಚರ್ಮದ ಮೇಲಿನ ಗಾಯಗಳಿಗೆ ಪೋಟ್ಯಾಶಿಯಂ ಪರಮಾಂಗನೇಟ್ ದ್ರಾವಣದಿಂದ ತೊಳೆದು ಐಯೋಡಿನ್ ದ್ರಾವಣ, ಮುಲಾಮು ಹಾಗೂ ಬೇವಿನ ಎಣ್ಣೆ ಲೇಪಿಸುವುದು
  • ರೋಗ ಹರಡುವುದನ್ನು ತಡೆಯಲು ರೋಗಗ್ರಸ್ಥ ಜಾನುವಾರುಗಳನ್ನು ಬೇರ್ಪಡಿಸುವುದು
  • ರೋಗಗ್ರಸ್ಥ ಜಾನುವಾರುಗಳಿಗೆ ಉಪಯೋಗಿಸಿದ ಎಲ್ಲಾ ಸಾಮಗ್ರಿಗಳನ್ನು ಸ್ವಚ್ಛಗೊಳಿಸುವುದು
  • ಹಸಿರು ಮೇವು, ಪೌಷ್ಠಿಕ ಆಹಾರ ಹಾಗೂ ಲವಣ ಮಿಶ್ರಣ ನೀಡಬೇಕು
  • ಕುಡಿಯುವ ನೀರಿನಲ್ಲಿ ಬೆಲ್ಲ, ಉಪ್ಪು ಹಾಗೂ ಅಡುಗೆ ಸೋಡಾ ಹಾಕಿ ದಿನಕ್ಕೆ ೫-೬ ಬಾರಿ ಕುಡಿಸಬೇಕು
  • ಕೀಟಗಳ ಹಾವಳಿ ತಪ್ಪಿಸಲು ಹಸಿಬೇವಿನ ಸೊಪ್ಪಿನ ಹೊಗೆ ಹಾಕಬೇಕು
  • ಈ ರೋಗವು ಸೊಳ್ಳೆ, ಉಣ್ಣೆ, ನೊಣ ಹಾಗೂ ಇತರೆ ಕೀಟಗಳಿಂದ ಮುಖ್ಯವಾಗಿ ಹರಡುವುದರಿಂದ ಕೊಟ್ಟಿಗೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಹಾಗೂ ಫಾರ್ಮಾಲಿನ್(1%)ಫಿನೈಲ್(2%) ಅಥವಾ ಸೋಡಿಯಂ ಹಾಪೀಕ್ಲೊರೈಡ್ (2%) ದಿನಕ್ಕೆ 2 ಬಾರಿ ಸಿಂಪಡಿಸಬೇಕು
  • ರೋಗಗ್ರಸ್ಥ ಜಾನುವಾರು ಮರಣ ಹೊಂದಿದ್ದಲ್ಲಿ ಆಳವಾದ ಗುಂಡಿಯಲ್ಲಿ ಹೂಳಬೇಕು ಹಾಗೂ ಹೆಚ್ಚಿನ ಮಾಹಿತಿ, ಚಿಕಿತ್ಸೆಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಾದ ಡಾ: ರಾಜೀವ ಎನ್, ಕೂಲೇರ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ