ಬೆಂಗಳೂರು: ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಕಂದಾಯ ಭವನದ ಮೇಲೆ ಉಪಲೋಕಾಯುಕ್ತರು ದಿಢೀರ್ ದಾಳಿ ನಡೆಸಿರುವ ಘಟನೆ ನಡೆದಿದೆ.
ಉಪಲೋಕಾಯುಕ್ತ ನ್ಯಾ.ಫಣೀಂದ್ರ ನೇತೃತ್ವದಲ್ಲಿ ಅಧಿಕಾರಿಗಳು ಕಂದಾಯ ಭವನದ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ.
ಸಾರ್ವಜನಿಕರಿಂದ ವ್ಯಾಪಕವಾಗಿ ದೂರು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.
ಕಂದಾಯ ಭವನದ ವಿರುದ್ಧ ಹಲವಾರು ದೂರುಗಳು ಬಂದಿದ್ದವು. ಈ ನಿಟ್ಟಿನಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ